ಬೆಂಗಳೂರು : ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ ಕಡೆಗಣನೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike) ಪ್ರತಿಭಟನೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾಧ್ಯಮದೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಯಾರೇ ಆದರೂ ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು. ಧರಣಿ ಮಾಡಿದ್ದಕ್ಕೆ ಕರವೇ ವಿರುದ್ಧ ಕ್ರಮ ಕೈಗೊಂಡಿಲ್ಲ. ಕಾನೂನು ಕೈಗೆತ್ತಿಕೊಂಡಿದ್ದಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಕನ್ನಡ ನಾಮಫಲಕ ಸಂಬಂಧ ನಿಯಮ ಮಾಡಬೇಕೆಂದು ಚಿಂತನೆ ಮಾಡಲಾಗಿದೆ. ಕನ್ನಡ ನಾಡಿನಲ್ಲಿ ಕನ್ನಡ ನಾಮಫಲಕವೇ ಇರಬೇಕು ಎಂದ ಆಗ್ರಹಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂಬ ಕರವೇ ಹೇಳಿಕೆ ವಿಚಾರವಾಗಿ ಸಿಎಂ ಮಾತನಾಡಿ, ಲೋಕಸಭಾ ಚುನಾವಣೆ ಬರ್ಲಿ ನೋಡೋಣ ಅನ್ನೋದಕ್ಕೆ ಅದಕ್ಕೂ ಇದಕ್ಕೂ ಏನು ಸಂಬಂಧ. ಸರ್ಕಾರ ಇರೋದು ಕಾನೂನು ಪಾಲನೆ ಮಾಡೋಕೆ ಅಲ್ವ ಕಾನೂನು ಪಾಲನೆ ಮಾಡಬೇಕೋ ಬೇಡ್ವಾ? ಕಾನೂನು ಸುವ್ಯವಸ್ಥೆ ಕಾಪಾಡಬೇಕಾ ಬೇಡ್ವಾ? ನಾವು ನಮ್ಮ ನಡುವಳಿಕೆಯಿಂದ ಇನ್ನೊಬ್ಬರಿಗೆ ತೊಂದರೆಯಾಗಬಾರದು ಅಲ್ವ. ಪ್ರತಿಭಟನೆಗೆ ಯಾವುದೇ ವಿರೋಧ ಇಲ್ಲ. ಸರ್ಕಾರದ ಆಸ್ತಿ ಪಾಸ್ತಿ ನಷ್ಟ ಮಾಡೋದಾ ಕಾನೂನು ಕೈಗೆ ತೆಗೆದುಕೊಳ್ಳಬಾರದು . ಯಾರೇ ಆದರೂ ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು. ಧರಣಿ ಮಾಡಿದ್ದಕ್ಕೆ ಕರವೇ ವಿರುದ್ಧ ಕ್ರಮ ಕೈಗೊಂಡಿಲ್ಲ. ಕಾನೂನು ಕೈಗೆತ್ತಿಕೊಂಡಿದ್ದಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.