Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ಬೆಂಗಳೂರಿನ ನಗರದ ಹಲವೆಡೆ ಇಂದು ಪವರ್ ಕಟ್…

ಬೆಂಗಳೂರು: ಬೆಂಗಳೂರಿನ ನಗರದ ಹಲವೆಡೆ ಇಂದು ಪವರ್ ಇರುವುದಿಲ್ಲ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ಹಲವಾರು ಯೋಜನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸುವ ಹಂತದಲ್ಲಿದ್ದು, ಇದಕ್ಕಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಈ ಕಾರಣದಿಂದಾಗಿ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಿದೆ.

ಕಾಮಗಾರಿಗಳಲ್ಲಿ ನಿಯಮಿತ ನಿರ್ವಹಣೆ, ದುರಸ್ತಿ ಕಾರ್ಯಗಳಾದ ನವೀಕರಣ, ಆಧುನೀಕರಣ, ಲೈನ್ ನಿರ್ವಹಣೆ, ಓವರ್‌ಹೆಡ್‌ನಿಂದ ಅಂಡರ್​ಗ್ರೌಂಡ್ ಕೇಬಲ್‌ಗಳನ್ನು ಬದಲಾಯಿಸಲಾಗುತ್ತಿದೆ. ಕಂಬಗಳ ಸ್ಥಳಾಂತರ, ರಿಂಗ್ ಮುಖ್ಯ ಘಟಕ ನಿರ್ವಹಣೆ, ಮರದ ಟ್ರಿಮ್ಮಿಂಗ್, ಜಲಸಿರಿ 24 x 7 ನೀರು ಸರಬರಾಜು ಕೆಲಸ ಮತ್ತು ಭೂಗತ ಕೇಬಲ್ ಹಾನಿ ಸರಿಪಡಿಸುವಿಕೆ ಸೇರಿಸುವ ಕೆಲಸ ನಡೆಯುತ್ತಿದೆ. ಪವರ್ ಕಟ್​​ ಸಮಯ ಹೆಚ್ಚಿನ ಕಡೆಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ರ ನಡುವೆ ಇರಲಿದ್ದು, ಕೆಲವು ಕೆಲಸಗಳನ್ನು ಮೊದಲೇ ಪೂರ್ಣಗೊಳಿಸುವ ನಿರೀಕ್ಷೆ ಇದೆ ಎನ್ನಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!