ಇಂದಿನಿಂದ ಎಲ್ಲೆಡೆ ಮುಸ್ಲಿಮರ ಪವಿತ್ರ ರಂಜಾನ್ ಉಪವಾಸ ವೃತ ಆರಂಭವಾಗಿದೆ. ಈ ತಿಂಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಶುಭಾಶಯವನ್ನು ಟ್ವೀಟ್ ಮೂಲಕ ಹಾರೈಸಿದ್ದಾರೆ.
ರಂಜಾನ್ ಹಿನ್ನೆಲೆ ಮೋದಿಯವರು, ಹಬ್ಬಕ್ಕೆ ಶುಭಾಶಯ ತಿಳಿಸುತ್ತಾ, ಈ ಪವಿತ್ರ ತಿಂಗಳು ನಮ್ಮ ಸಮಾಜದಲ್ಲಿ ಹೆಚ್ಚಿನ ಏಕತೆ ಹಾಗೂ ಸಾಮರಸ್ಯ ತರಲಿ ಹಾಗೂ ಇದು ಬಡವರ ಸೇವೆಯ ಮಹತ್ವವನ್ನು ಪುನರುಚ್ಚರಿಸಲಿ ಎಂದಿದ್ದಾರೆ. ಇಸ್ಲಾಂ ಸಮುದಾಯದ ಅತಿ ದೊಡ್ಡ ಹಬ್ಬವಾದ ರಂಜಾನ್ ತಿಂಗಳಲ್ಲಿ ಹೆಚ್ಚಿನವರು ಉಪವಾಸ ಮಾಡುತ್ತಾರೆ. ಇಸ್ಲಾಮಿಕ್ ಕ್ಯಾಲೆಂಡರ್ ಈ ತಿಂಗಳಲ್ಲಿ ದೇಶಾದ್ಯಂತ ಮುಸ್ಲಿಮರು ಸುರ್ಯೋದಯದಿಂದ ಸೂರ್ಯಾಸ್ತದವರೆಗೆ ಉಪವಾಸ ಮಾಡುತ್ತಾರೆ. ಈ ತಿಂಗಳ ಉಪವಾಸದ ಬಳಿಕ ಈದ್-ಉಲ್-ಫಿತರ್ ಅನ್ನು ಆಚರಿಸುತ್ತಾರೆ.