Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ದಾವಣಗೆರೆಯಲ್ಲಿ 144 ನಿಷೇಧಾಜ್ಞೆ ಜಾರಿ

ದಾವಣಗೆರೆ : ದಾವಣಗೆರೆ ನಗರದ ಮಾಗಾನಹಳ್ಳಿ ರಸ್ತೆಯಲ್ಲಿ ಇರುವ ರಾಮಕೃಷ್ಣ ಹೆಗಡೆ ನಗರ ತೆರವು ಕಾರ್ಯಾಚರಣೆ ನಿಮಿತ್ತ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ದಾವಣಗೆರೆ​ ರಿಂಗ್​ ರೋಡ್​​ ಕಾಮಗಾರಿ ಪೂರ್ಣಗೊಳಿಸುವ ಹಿನ್ನೆಲೆ ದಾವಣಗೆರೆ ನಗರದ ಮಾಗಾನಹಳ್ಳಿ ರಸ್ತೆಯಲ್ಲಿ ಇರುವ ರಾಮಕೃಷ್ಣ ಹೆಗಡೆ ನಗರ ತೆರವು ಕಾರ್ಯಾಚರಣೆ ಆರಂಭವಾಗಿದೆ. ನಗರದ ಹಲವು ಮನೆಗಳ ತೆರವು ಕಾರ್ಯ ಹಿನ್ನೆಲೆ ಮುಂಜಾಗೃತ ಕ್ರಮವಾಗಿ 144 ನಿಷೇಧಾಜ್ಞೆ ಜಾರಿ ಮಾಡಿ ಎಂದು ದಾವಣಗೆರೆ ಉಪ ವಿಭಾಗಾಧಿಕಾರಿ ದುರ್ಗಾಶ್ರೀ ಆದೇಶ ಹೊರಡಿಸಿದ್ದಾರೆ.

ಬಹುತೇಕ ಅಲ್ಪಸಂಖ್ಯಾತರ ಮನೆಗಳನ್ನು ADC ಲೋಕೇಶ್, ಎಎಸ್ ಪಿ ವಿಜಯಕುಮಾರ ಸಂತೋಷ, ಎಸಿ ದುರ್ಗಾಶ್ರೀ ನೇತ್ರತ್ವದಲ್ಲಿ‌ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಏಕಾಏಕಿ ಜೆಸಿಬಿಯಿಂದ ಮನೆ ಕೆಡವಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮನೆಯಲ್ಲಿರುವ ವಸ್ತುಗಳನ್ನು ತೆಗೆಯಲು ಬಿಡದೆ ಜೆಸಿಬಿಯಿಂದ‌ ಮನೆ ಕೆಡವಿದ ಆರೋಪ ಮಾಡಿ ಪಾಲಿಕೆ ಆಯುಕ್ತೆ ರೇಣುಕಾರವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!