ಕೋಲಾರ : ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಬಂಧನ ವಿರೋಧಿಸಿ ಕೋಲಾರದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.
ಮಾಲೂರು ಪಟ್ಟಣದ ಮಾರಿಕಾಂಬಾ ವೃತ್ತದಲ್ಲಿ ಬೆಂಗಳೂರು-ಮಾಲೂರು-ಹೊಸೂರು ಮಾರ್ಗದ ರಸ್ತೆ ತಡೆ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.
ಅಲ್ಲದೇ ನಾರಾಯಣಗೌಡ ಅವರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಆಗ್ರಹಿಸಿದ್ದಾರೆ. ಬಳಿಕ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಮಾಲೂರು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸರ ನಿಯೋಜಿಸಿದ್ದಾರೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ.