ರಾಮನಗರ : ಕುಂಬಳಗೂಡು ಬಳಿಯ ಕಣಮಿಣಿಕಿ ಟೋಲ್ ಬಳಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಟೋಲ್ ದರ ಏರಿಕೆ ಖಂಡಿಸಿ, ವಿವಿಧ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಟೋಲ್ ದರ ಶೇ.22 ರಷ್ಟು ಹೆಚ್ಚಳ ಮಾಡಲಾಗಿದೆ. ದರ ಹೆಚ್ಚಳ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಟೋಲ್ ದರ ಇಳಿಕೆ ಮಾಡಲಾಗುತ್ತಾ ಅನ್ನೋದನ್ನು ಕಾದು ನೋಡಬೇಕಾಗಿದೆ.