ಶಿವಮೊಗ್ಗ : ಕಾಂಗ್ರೆಸ್ ಸರ್ಕಾರ (Congress government) ಆಡಳಿತ ಬೆನ್ನಲ್ಲೆ ವಿದ್ಯುತ್ ದರ ಏರಿಕೆ( Electricity Rate hiked) ಖಂಡಿಸಿ ಶಿವಮೊಗ್ಗದಲ್ಲಿ ಬಿಜೆಪಿ (BJP)ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ
ಕರ್ನಾಟಕ ವಿಧಾನ ಸಭೆ ಚುನಾವಣೆ ಭಾರೀ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಸಾಧಿಸಿದಲ್ಲದೇ ಘೋಷಣೆ ಮಾಡಿದ್ದ ಐದು ಗ್ಯಾರಂಟಿಗಳನ್ನು ಮಾನದಂಡಗಳ ಆಧಾರದಲ್ಲಿ ಜಾರಿಗೆ ತರಲಾಗಿದೆ. ಪಂಚ ಗ್ಯಾರಂಟಿಗಳ ಪೈಕಿ 200 ಯೂನಿಟ್ ಉಚಿತ ವಿದ್ಯುತ್ ಜಾರಿಗೊಳಿಸುವ ನೆಪದಲ್ಲಿ ವಿದ್ಯುತ್ ದರ ಏರಿಕೆ ಮಾಡಲಾಗಿದೆ ಎಂದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗುತ್ತಿತ್ತು.
ಈ ಬೆನ್ನಲ್ಲೆ ಶಿವಮೊಗ್ಗದ ಮೆಸ್ಕಾಂ ಕಚೇರಿಯ ಮುಂಭಾಗದಲ್ಲಿ ವಿದ್ಯುತ್ ದರ ಏರಿಕೆ ಖಂಡಿಸಿ ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದಲ್ಲದೇ ಕಾಂಗ್ರೆಸ್ ಸರ್ಕಾರ ಜನರಿಗೆ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿದೆ ಕಿಡಿಕಾರಿದ್ದಾರೆ. ಅಲ್ಲದೇ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಮಾಜಿ ಶಾಸಕ ಅಶೋಕ್ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿದ್ದಾರೆ. ಈ ಬಳಿಕ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಮಾಜಿ ಶಾಸಕ ಅಶೋಕ್ ಅವರನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.