ಬೆಂಗಳೂರು : ರಾಹುಲ್ ಗಾಂಧಿ ಈ ದೇಶದ ಪ್ರಧಾನಿಯಾಗಬೇಕು ಎಂದು ಖರ್ಗೆ ಹೆಸರು ಚರ್ಚೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಆಶ್ಚರ್ಯಕರ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಹುಲ್ ದೇಶಕ್ಕಾಗಿ ಭಾರತ್ ಜೋಡೋ ಯಾತ್ರೆ ಮಾಡಿದ್ದಾರೆ ಈಗ ನ್ಯಾಯಕ್ಕಾಗಿ ಮತ್ತೆ ಪಾದಯಾತ್ರೆ ಮಾಡುತ್ತಿದ್ದಾರೆ. ಜನರ ನ್ಯಾಯಕ್ಕಾಗಿ ಹೋರಾಡುತ್ತಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಕೈಗೆ ಅಧಿಕಾರ ಕೊಡಬೇಕು ಮೋದಿ ಬಿಟ್ಟು ರಾಹುಲ್ ಗಾಂಧಿಗೆ ಅಧಿಕಾರ ನೀಡಬೇಕು ಪರೋಕ್ಷವಾಗಿ ಮಲ್ಲಿಕಾರ್ಜುನ ಖರ್ಗೆ ಬದಲು ರಾಹುಲ್ ಪರ ಸಿದ್ದರಾಮಯ್ಯ ಬ್ಯಾಟ್ ಬೀಸಿದ್ದಾರೆ