ಬೆಂಗಳೂರು: ಬೆಂಗಳೂರಿನಲ್ಲಿ ಗಣರಾಜ್ಯೋತ್ಸವಕ್ಕೆ ಕಬ್ಬನ್ ರಸ್ತೆಯಲ್ಲಿರುವ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಎರಡೂ ದಿಕ್ಕುಗಳಲ್ಲಿನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಇನ್‌ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸುವ ವಾಹನಗಳು ನೇರವಾಗಿ ಇನ್ ಫೆಂಟ್ರಿ ರಸ್ತೆ- ಸಫೀನಾ ಪ್ಲಾಜಾಕಡೆ ಎಡ ತಿರುವು ಪಡೆದು ಮೈನ್ಗಾರ್ಡ್ ರಸ್ತೆ – ಆಲೀಸ್ ಸರ್ಕಲ್- ಡಿಸ್ಪೆನ್ಸರಿ ರಸ್ತೆ – ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ – ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.
ತುರ್ತು ಸೇವಾ ವಾಹನಗಳಾದ ಆಂಬುಲೆನ್ಸ್, ಅಗ್ನಿ ಶಾಮಕ ದಳದ ವಾಹನಗಳು, ನೀರಿನ ಟ್ಯಾಂಕರ್, ಕೆ.ಎಸ್.ಆರ್.ಪಿ. ಸಿ.ಆರ್.ಟಿ., ಬಿ.ಬಿ.ಎಂ.ಪಿ. ಹಾಗೂ ಪಿ.ಡಬ್ಲ್ಯೂ.ಡಿ ವಾಹನಗಳು ಪ್ರವೇಶ ದ್ವಾರ-2 ರ ಮುಖಾಂತರ ಪರೇಡ್ ಮೈದಾನದ ಒಳಗೆ ಪ್ರವೇಶಿಸಿ ನಂತರ ಪೋರ್ಟ್ ವಾಲ್ ಹಿಂಭಾಗದಲ್ಲಿ (ದಕ್ಷಿಣದ ಕಡೆಗೆ) ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.