ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಕೋವಿಡ್ ಸಮಯದಲ್ಲಿ ಆದ ಹಗರಣಗಳ ಬಗ್ಗೆ ಮಹತ್ವದ ಸಭೆ ನಡೆಸಲಾಯಿತು. ಸಭೆಯಲ್ಲಿ ಆರೋಗ್ಯಾಧಿಕಾರಿ ರಣದೀಪ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು. ಇನ್ನೂ ಸಭೆಯಲ್ಲಿ ಕೋವಿಡ್ ಸಂದರ್ಭದಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ವರದಿ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವರದಿ ಕೇಳಿದ್ದಾರೆ. ಮತ್ತೊಂದು ಸಭೆಯಲ್ಲಿ ಸಂಪೂರ್ಣ ವರದಿ ನೀಡಬೇಕು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಇನ್ನು ಕೊರೋನ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಆಕ್ಸಿಜನ್ ದುರಂತ ಪ್ರಕರಣಕ್ಕೆ ಮರು ಜೀವ ಬಂದಿದ್ದು ಪ್ರಕರಣವನ್ನು ಕೈಗೆತ್ತಿಕೊಂಡು ತನಿಖೆ ನಡೆಸು ರಾಜ್ಯ ಸರ್ಕಾರ ಮುಂದಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್ ಅವರು ದುರದೃಷ್ಟ ವರ್ಷದ ಆಕ್ಸಿಜನ್ ದುರಂತಕ್ಕೆ ಯಾರು ಕಾರಣ ಎಂಬುವುದರ ಬಗ್ಗೆ ಇನ್ನು ತನಿಖೆ ಕೈಗೊಂಡಿಲ್ಲ ಆದರೆ ಇದೀಗ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಪೂರ್ಣ ತನಿಖೆ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ..
ವರದಿ : ವರ್ಷಿತ ತಾಕೇರಿ