Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ಶಾಲಾ ಕಟ್ಟಡ ಕುಸಿದು ಬಿದ್ದು 20 ಜನರಿಗೆ ಗಾಯ

ಆನೇಕಲ್ : ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು 20 ಜನ ಗಾಯಗೊಂಡಿದ್ದಾರೆ. ಕಟ್ಟಡದ ಅವಶೇಷಗಳಡಿ ಇನ್ನೂ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಗಾಯಾಳು ಕಾರ್ಮಿಕರನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ. ಕಟ್ಟಡದ ಅವಶೇಷಗಳಡಿ ಇನ್ನೂ ಹಲವು ಕಾರ್ಮಿಕರು ಸಿಲುಕಿದ್ದಾರೆ ಎನ್ನಲಾಗಿದೆ. ಎರಡನೇ ಅಂತಸ್ತಿನ ನಿರ್ಮಾಣದ ವೇಳೆ ಕಟ್ಟಡ ಕುಸಿದಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!