ಬೆಂಗಳೂರು : ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳುತ್ತಿದ್ದಂತೆ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿನಿವಾಸದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭಮ ಜೋರಾಗಿದೆ ಈ ಬೆನ್ನಲ್ಲೆ ರೇವಂತ್ ರೆಡ್ಡಿ ಮನೆಗೆ ಬಿಗಿ ಭದ್ರತೆ ನೀಡಲಾಗಿದೆ.
ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶದ ಮಾಹಿತಿ ಪ್ರಕಾರ ಕಾಂಗ್ರೆಸ್ ಭಾರೀ ಮುನ್ನಡೆ ಸಾಧಿಸುವ ಆಧಾರದಲ್ಲಿ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಮನೆಗೆ ಬಿಗಿ ಭದ್ರತೆ ನೀಡಲಾಗಿದೆ.
ರೇವಂತ್ ರೆಡ್ಡಿ ಅವರ ಹುಟ್ಟೂರು ಕೊಡಂಗಲ್ನ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಜುಬಿಲಿ ಹಿಲ್ಸ್ನ ಸಿಬಿಐ ಕಾಲೋನಿಯಲ್ಲಿರುವ ಅವರ ನಿವಾಸದ ಮುಂದೆ ಜಮಾಯಿಸಿದ್ದಾರೆ .ಪಕ್ಷದ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಜಮಾಯಿಸಿ ಫಲಿತಾಂಶವನ್ನು ವೀಕ್ಷಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಹೆಚ್ಚುವರಿ ಭದ್ರತೆ ಒದಗಿಸಲಾಗುತ್ತಿದೆ.