ಬೆಂಗಳೂರು : ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಮತ್ತು ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ರಂಗನಾಥ್ ರಾವ್ (83) ವಿಧಿವಶರಾಗಿದ್ದಾರೆ.
ರಂಗನಾಥ್ ರಾವ್ ಅಂತ್ಯಕ್ರಿಯೆ ಸೋಮವಾರ ಸಂಜೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ನಡೆಯಲಿದೆ. 1942ರಲ್ಲಿ ಬೆಂಗಳೂರು ಜಿಲ್ಲೆಯ ಹಾರೋಹಳ್ಳಿಯಲ್ಲಿ ಹುಟ್ಟಿದ ಜಿ.ಎನ್.ರಂಗನಾಥ್ ಅವರು ಹೊಸಕೋಟೆ ಹಾಗೂ ಬೆಂಗಳೂರು ನಗರದಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದರು. ಜಿ.ಎನ್. ರಂಗನಾಥ್ ರಾವ್ ಅವರು ಪತ್ರಿಕೋದ್ಯಮದಲ್ಲಿ ತಮ್ಮ ವೃತ್ತಿ ಜೀವನ ಪ್ರಾರಂಭಿಸಿದ್ದು, 1962 ರಲ್ಲಿ ಸಂಯುಕ್ತ ಕರ್ನಾಟಕ ಬೆಂಗಳೂರು ಆವೃತ್ತಿಯಲ್ಲಿ ಉಪಸಂಪಾದಕರಾಗಿದ್ದರು. ಬಳಿಕ ಪ್ರಜಾವಾಣಿಗೆ ಸೇರಿಕೊಂಡು ಕಾರ್ಯನಿರ್ವಾಹಕ ಸಂಪಾದಕರಾಗಿ ನಿವೃತ್ತರಾದರು. ಅಲ್ಲದೇ ಜಿ.ಎನ್. ರಂಗನಾಥ್ ರಾವ್ ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದರು ಅಲ್ಲದೇ ಹಿರಿಯ ಪತ್ರಕರ್ತರಾಗಿ ಜನಮನ್ನಣೆ ಗಳಿಸಿದ್ದರು.