ಅಂತೂ ಇಂತೂ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಸಿಎಂ ರೇಸ್ ನಲ್ಲಿ ಡಿ.ಕೆ.ಶಿವಕುಮಾರ್ ಅವರನ್ನ ಹಿಂದಿಕ್ಕೆ ಸಿದ್ದರಾಮಯ್ಯ ಗೆದ್ದು ಬೀಗಿದ್ದಾರೆ ಎನ್ನಲಾಗಿದೆ.
ಕರ್ನಾಟಕ ಕದನ ಗೆದ್ದ ದಕ್ಷಿಣಾಪಥೇಶ್ವರ ಕಾಂಗ್ರೆಸ್ ನ ಮಾಸ್ ಲೀಡರ್, ಸಿದ್ದರಾಮಯ್ಯ ಸಿಎಂ ಗದ್ದುಗೆ ಏರೋದು ಬಹುತೇಕ ಫಿಕ್ಸ್ ಆಗಿದೆ. ಆ ಮೂಲಕ ಎರಡನೇ ಬಾರಿಗೆ ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಇತ್ತ ಸಿದ್ದರಾಮಯ್ಯ ನಾಳೆ ಮಧ್ನಾಹ್ನ 3.30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಹಿತಿಯ ಪ್ರಕಾರ ಕಂಠೀರವ ಸ್ಟೇಡಿಯಂನಲ್ಲಿ ಸಿದ್ದರಾಮಯ್ಯ ಪಟ್ಟಾಭಿಷೇಕ ನಡೆಯಲಿದೆ ಎಂದು ತಿಳಿದು ಬಂದಿದೆ.