Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!Political News

ಧರ್ಮ ಒಡೆಯುವ ಬ್ರ್ಯಾಂಡ್​ ಅಂಬಾಸಿಡರ್ ʻಸಿದ್ದರಾಮಯ್ಯʼ : ಆರ್‌. ಅಶೋಕ್ ವಾಗ್ದಾಳಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಧರ್ಮ ಒಡೆಯುವ ಬ್ರ್ಯಾಂಡ್​ ಅಂಬಾಸಿಡರ್ ಎಂದು ವಿಪಕ್ಷ ನಾಯಕ ಆರ್‌. ಅಶೋಕ್ ವಾಗ್ದಾಳಿ ನಡೆಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, 31 ವರ್ಷಗಳ ನಂತರ ಹುಬ್ಬಳ್ಳಿಯಲ್ಲಿ ಒಬ್ಬ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದು, ರಾಮಭಕ್ತರ ಬಂಧನ ಸರ್ಕಾರದ ಟಿಪ್ಪು ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಸಿದ್ದರಾಮಯ್ಯ ಧರ್ಮ ಒಡೆಯುವ ಬ್ರ್ಯಾಂಡ್ ಅಂಬಾಸಿಡರ್ ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರ ಮತ್ತೆ ದ್ವೇಷದ ರಾಜಕಾರಣ ಶುರು ಮಾಡಿದೆ. ಕಾಂಗ್ರೆಸ್​ನವರು ಮುಂದೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ. ರಾಮನ ಆರಾಧನೆ ಮಾಡುವುದಾದರೆ ರಾಮನ ಪೂಜೆ ಮಾಡಬೇಕಿತ್ತು. ರಾಮನ ಹೆಸರು ಹೇಳಿದರೆ ಕಾಂಗ್ರೆಸ್​ನವರಿಗೆ​ ಭಯವಾಗುತ್ತದೆ.

ರಾಜ್ಯದಲ್ಲಿ ರೈತರ ಕೊರಳಿಗೆ ಸಿದ್ದರಾಮಯ್ಯ ಸರ್ಕಾರ ಕುಣಿಕೆ ಹಾಕುತ್ತಿದೆ. ಅಲ್ಪಸಂಖ್ಯಾತರನ್ನು ಓಲೈಸಲು ಕಾಣಿಕೆ ಮೇಲೆ ಕಾಣಿಕೆ ಕೊಡುತ್ತಿದ್ದಾರೆ. ಮತಕ್ಕಾಗಿ ರಾಜಕೀಯ ಮಾಡೋದು ಸಿಎಂ ರಕ್ತದ ಕಣದಲ್ಲಿ ಬಂದಿದೆ ಎಂದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!