ಬೆಳಗಾವಿ : ಮುಸ್ಲಿಮರಿಗೆ ದೇಶದ ಸಂಪತ್ತು ಹಂಚುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಟಿಪ್ಪು ಅಂದ್ರೆ ಸಿದ್ದರಾಮಯ್ಯ ಅವರಿಗೆ ಬಹಳ ಪ್ರೀತಿ. ನಿನ್ನೆಯ ಅವರ ಮಾತು ದೇಶ ಮತ್ತು ರಾಜ್ಯದ ದೃಷ್ಟಿಯಿಂದ ಒಳ್ಳೆಯ ಹೇಳಿಕೆ ಅಲ್ಲ . ಟಿಪ್ಪು ಮೇಲೆ ಅತಿಯಾದ ಪ್ರೀತಿ ತೋರಿಸಿ ಹಿಂದೆ ಏನಾಯ್ತು? ಹಿಂದುಗಳನ್ನ ಎರಡನೇ ದರ್ಜೆ ರೀತಿ ನೋಡ್ತಿದ್ದಾರೆ. ಎಲ್ಲರಿಗೂ ಸಮಾನತೆ ಇರಬೇಕು ಟಿಪ್ಪು ಜಯಂತಿ, ಶಾದಿ ಭಾಗ್ಯ, ಮುಸ್ಲಿಂ ವಿವಾಹಕ್ಕೆ ಧನ ಸಹಾಯ ಈ ರೀತಿ ಕಾರ್ಯಕ್ರಮಗಳನ್ನ ತಂದ್ರು ಮುಸ್ಲಿಂಮರನ್ನ ವೋಟಿನ ಗಾಳವಾಗಿ ಕಾಂಗ್ರೆಸ್ ಬಳಕೆ ಮಾಡಿಕೊಳ್ತಿದೆ ಎಂದು ಟಾಂಗ್ ನೀಡಿದ್ದಾರೆ.