ರಾಯಚೂರು : ಜಿಲ್ಲೆಯ ಲಿಂಗಸುಗೂರು ತಾಲೂಕಿನ ದೇವರಭೂಪೂರಿನಲ್ಲಿ ತಂದೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಮಗನೇ ಕೊಂದ ಘನಘೋರ ಕೃತ್ಯವೊಂದು ಬೆಳಕಿಗೆ ಬಂದಿದೆ.
ತಂದೆ ಬಂಡಿ ತಿಮ್ಮಣ್ಣ(55) ಕೊಲೆಯಾದ ತಂದೆ ಎಂದು ಗುರುತಿಸಲಾಗಿದೆ. ತಿಮ್ಮಣ್ಣ ಪ್ರತಿ ದಿನ ಗಾಂಜಾ, ಮದ್ಯ ಸೇವಿಸಿ ತಾಯಿಗೆ ನಿತ್ಯ ಕಿರುಕುಳ ನೀಡುತ್ತಿದ್ದ ಇದರಿಂದ ಬೇಸತ್ತ ಪುತ್ರ ಶೀಲವಂತ ತಂದೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ತಂದೆಯನ್ನೆ ಕೊಂದಿದ್ದಾನೆ.
ಬಳಿಕ 112ಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ. ತಂದೆಯನ್ನೇ ಕೊಲೆ ಮಾಡಿ ತಾನೇ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಬಳಿಕ ಸ್ಥಳಕ್ಕೆ ಲಿಂಗಸುಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ