ಬೆಂಗಳೂರು : ಸ್ಪೀಕರ್ ಸ್ಥಾನವನ್ನು ರಾಜಕೀಯ, ಜಾತಿ ಧರ್ಮದಿಂದ ನೋಡುವಂತಿಲ್ಲ ಎನ್ನುವ ಮೂಲಕ ಸಚಿವ ಜಮೀರ್ ಅಹ್ಮದ್ ಅವರಿಗೆ ಸ್ಪೀಕರ್ ಯು.ಟಿ ಖಾದರ್ ಖಡಕ್ ಉತ್ತರ ನೀಡಿದ್ದಾರೆ.
ಜಮೀರ್ ಅಹ್ಮದ್ ಮುಸ್ಲಿಂ ಸ್ಪೀಕರ್ ಹೇಳಿಕೆ ವಿಚಾರವಾಗಿ ಸ್ಪೀಕರ್ ಯು.ಟಿ ಖಾದರ್ ಮಾಧ್ಯಮದೊಂದಿಗೆ ಮಾತನಾಡಿ, ಸಂವಿಧಾನ ಬದ್ಧವಾದ ಸ್ಪೀಕರ್ ಸ್ಥಾನವಾಗಿದೆ. ನನಗೆ ಗೌರವ ಕೊಡುವುದು ಯು.ಟಿ ಖಾದರ್ ಗೆ ಗೌರವ ಕೊಡೋದು ಅಲ್ಲ. ಸಂವಿಧಾನ ಪೀಠಕ್ಕೆ ಮತ್ತು ಸಭಾಧ್ಯಕ್ಷ ಸ್ಥಾನಕ್ಕೆ ಹಾಗೂ ಅಲ್ಲಿ ಕೂರುವ ನಾವು ಗೌರವ ಉಳಿಸುವ ಕೆಲಸ ಮಾಡಬೇಕು.
ನಾನು ಯಾರ ಹೇಳಿಕೆಗೂ ಕಮೆಂಟ್ ಮಾಡೋದಿಲ್ಲ. ನನ್ನನ್ನು ಜಾತಿ, ಧರ್ಮದ ಆಧಾರದಲ್ಲಿ ಯಾರು ಸಹ ಆ ಪೀಠದಲ್ಲಿ ಕೂರಿಸಿಲ್ಲ. ಅರ್ಹತೆಗೆ ಅನುಗುಣವಾಗಿ ಸಂವಿಧಾನ ಬದ್ಧವಾಗಿ ಕೆಲಸ ನಿರ್ವಹಿಸುವ ವಿಶ್ವಾಸದಿಂದ ಕೂರಿಸಿದ್ದಾರೆ. ಸಂವಿಧಾನಕ್ಕೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ನಾನು ಎಲ್ಲರಿಗೂ ಗೌರವ ಕೊಟ್ಟು ಗೌರವ ಪಡೆಯುತ್ತೇನೆ. ಎಲ್ಲರ ಸ್ಪೀಕರ್ ಆಗಿ ಕೆಲಸ ನಿರ್ವಹಿಸುತ್ತೇನೆ. ಸ್ಪೀಕರ್ ಸ್ಥಾನವನ್ನು ಜಾತಿ ಧರ್ಮ ಬಿಟ್ಟು ನೋಡಬೇಕು