ಬೆಂಗಳೂರು : ಹುಬ್ಬಳ್ಳಿಯ ರಾಮ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಸರ್ಕಾರ 48 ಗಂಟೆಗಳಲ್ಲಿ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದಂತ ಪ್ರತಿಭಟಿಸುತ್ತೇವೆ ಎಂದು ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಎಚ್ಚರಿಕೆ ನೀಡಿದ್ದಾರೆ
1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಕುರಿತಾದ ಗಲಭೆಗೆ ಸಂಬಂಧಿಸಿದಂತೆ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಹುಬ್ಬಳ್ಳಿಯ ಚನ್ನಪೇಟೆಯ ನಿವಾಸಿಯಾದ ಶ್ರೀಕಾಂತ್ ಪೂಜಾರಿ ಎಂಬಾತನನ್ನು ಬಂಧಿಸಿದ ಕೂಡಲೇ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ರೊಚ್ಚಿಗೆದ್ದು ಸರ್ಕಾರದ ವಿರುದ್ಧ ಕಿಡಿಕಾರಲಾರಂಭಿಸಿವೆ. ಇದೀಗ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಸರ್ಕಾರ 48 ಗಂಟೆಗಳಲ್ಲಿ ಬಿಡುಗಡೆ ಮಾಡಬೇಕು.ಇಲ್ಲದಿದ್ದರೆ ರಾಜ್ಯಾದಂತ ಪ್ರತಿಭಟಿಸುತ್ತೇವೆ. ವಿನಾಶಕಾಲೆ ವಿಪರೀತ ಬುದ್ಧಿ ಎಂಬಂತೆ ಕಾಂಗ್ರೆಸ್ ಆಡಳಿತ ನಡೆಸುತ್ತಿದೆ. 31 ವರ್ಷದ ಹಿಂದಿನ ಘಟನೆಯ ಆಧಾರದಲ್ಲಿ ಬಂಧಿಸಲಾಗಿದೆ ರಾಜ್ಯದಲ್ಲಿ ನಾಡದ್ರೋಹಿ, ದೇಶದ್ರೋಹಿ ಸರ್ಕಾರವಿದೆ ಎಂದು ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಎಚ್ಚರಿಕೆ ನೀಡಿದ್ದಾರೆ