ಬೆಂಗಳೂರು : ಬಿಜೆಪಿಯ ರಾಷ್ಟ್ರೀಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ತೆಲಂಗಾಣದ ಸಂಜಯ್ ಬಂಡಿ (Sanjay Bundy) ನೇಮಕವಾದ ಬೆನ್ನಲ್ಲೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ(BJP National General Secretary) ಹುದ್ದೆಯಿಂದ ಸಿಟಿ ರವಿ(CT Ravi)ಗೆ ಕೊಕ್ ನೀಡಲಾಗಿದೆ.
ಕರ್ನಾಟಕದ ವಿಧಾನ ಸಭೆಯಲ್ಲಿ ಭಾರೀ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದೇ ತಡ ಇದೀಗ ಬಿಜೆಪಿ ಪಾಳಯದಲ್ಲಿ ಮಹತ್ತರ ಬದಲಾವಣೆಯಾಗಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಟಿ ರವಿಗೆ ಕೊಕ್ ನೀಡಲಾಗಿದೆ. ತೆಲಂಗಾಣದ ಸಂಜಯ್ ಬಂಡಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆಯ ಅಧಿಕಾರವನ್ನು ನೀಡಲಾಗಿದೆ ಎಂದು ವರದಿಯಾಗಿದೆ.