ಬೆಂಗಳೂರು : ನಿನ್ನೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆರ್.ಅಶೋಕ್ಗೆ ವಿಪಕ್ಷ ನಾಯಕನ ಪಟ್ಟ ನೀಡಿದ ಬೆನ್ನಲ್ಲೆ ಕಾಂಗ್ರೆಸ್ ಟ್ವೀಟ್ ಮಾಡಿ ಲೇವಡಿ ಮಾಡಿದ್ದಾರೆ.
ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕನಾಗಿದ್ದಾರೆ. ವಿರೋಧ ಪಕ್ಷದ ನಾಯಕನಾಗಲು ಬೇಕಿರುವ ಜ್ಞಾನ, ಅರ್ಹತೆ ಯಾವುದೂ ಇಲ್ಲದ ನಕಲಿ ಸಾಮ್ರಾಟನೇ ಕೊನೆಯ ಆಯ್ಕೆಯಾಗಿದ್ದು ಬಿಜೆಪಿ ನಾಯಕರ ಬರಗಾಲ ಎದುರಿಸುತ್ತಿರುವುದಕ್ಕೆ ನಿದರ್ಶನ ಎಂದು ಟೀಕೆ ಮಾಡಿದ್ದಾರೆ .
ಅಲ್ಲದೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಂತಹ ನಾಯಕರೆದುರು ತರಗೆಲೆಯಂತಹ ವ್ಯಕ್ತಿಯನ್ನು ತಂದು ಬಿಜೆಪಿ ಕೂರಿಸಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.