ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮೊಣಕಾಲು ನೋವಿನಿಂದ ಬಳಲುತ್ತಿದ್ದ ದೇವೆಗೌಡರು ಚಿಕಿತ್ಸೆಗಾಗಿ ಐದು ದಿನಗಳ ಹಿಂದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಈಗ ಮೊಣಕಾಲು ನೋವು ಸುಧಾರಿಸಿದ್ದು, ವೈದ್ಯರ ಸಲಹೆಯಂತೆ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಮೊಣಕಾಲು ನೋವಿನ ಕಾರಣ ಚಿಕಿತ್ಸೆಗಾಗಿ ಕಳೆದ ಐದು ದಿನಗಳಿಂದ ಹೆಚ್ ಡಿ ಡಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನೋವು ಕಡಿಮೆ ಆದ ಕಾರಣ ಬೆಳಗ್ಗೆಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ.
ಜೆಡಿಎಸ್ ವರಿಷ್ಥರಾದ ಎಚ್.ಡಿ ದೇವೇಗೌಡ ಅವರು ಫೆಬ್ರವರಿ 28ರಂದು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದರು. ಇದರಿಂದ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ಆದರೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದ ಹೆಚ್.ಡಿ.ಡಿ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಸಾಮಾನ್ಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದೇನೆ. ಯಾರು ಗಾಬರಿ ಆಗಬೇಡಿ, ಕೆಲವೇ ದಿನಗಳಲ್ಲಿ ಡಿಸ್ಚಾರ್ಜ್ ಆಗಿ ಮನೆಗೆ ಮರಳುತ್ತೇನೆ ಎಂದಿದ್ದರು.
ದಳ ಹಮ್ಮಿಕೊಂಡಿರುವ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭ ಹಾಗೂ ಬೃಹತ್ ಸಮಾವೇಶ ಮಾರ್ಚ್ 26ರಂದು ನಡೆಯಲಿದ್ದು, ಆ ದಿನ ಕುಂಬಳಗೋಡಿನಿಂದ ಆರಂಭವಾಗುವ ರೋಡ್ಶೋದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಪಾಲ್ಗೊಂಡು ಪಕ್ಷಕ್ಕೆ ಮತ್ತಷ್ಟು ಬಲ ತುಂಬಿದ್ದಾರೆ. ನಾಗಮಂಗಲ ಕ್ಷೇತ್ರದ ಶಾಸಕ ಸುರೇಶ್ ಗೌಡ ಅವರು ನಗರದಲ್ಲಿ ಭಾನುವಾರ ಆಯೋಜಿಸಿದ್ದ ಕ್ಷೇತ್ರದ ನಿವಾಸಿಗಳ ಸಭೆಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಈ ವಿಷಯ ತಿಳಿಸಿದರು. ಮಂಡ್ಯ ಮತ್ತು ಮೈಸೂರು ನಡುವಿನ ಸ್ಥಳವೊಂದರಲ್ಲಿ ಯಾತ್ರೆಯ ಸಮಾರೋಪ ನಡೆಯಲಿದೆ. ಸಮಾರೋಪದ ಸ್ಥಳದವರೆಗೂ ರೋಡ್ ಶೋ ನಡೆಸಲಿರುವ ದೇವೇಗೌಡರು, ಪಕ್ಷಕ್ಕೆ ಶಕ್ತಿ ತುಂಬಲಿದ್ದಾರೆ’ ಎಂದರು.
ಅಶ್ವದಿವಿತ್,ಹಲಸಬಾಳು