ಹೈದರಾಬಾದ್ : ಇಂದು 4 ರಾಜ್ಯಗಳಿಗೆ ಮಾತ್ರ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಗೆಲುವಿನತ್ತ ಮುಖ ಮಾಡಿದ್ದ ಬೆನ್ನಲ್ಲೆ ತೆಲಂಗಾಣ ಜನತೆಯ ಗೆಲುವು ಎಂದು ಡಿಕೆಶಿ ಹಾಡಿ ಹೊಗಳಿದ್ದಾರೆ
ಮಾಧ್ಯಮದೊಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ತೆಲಂಗಾಣದಲ್ಲಿ ಮತದಾರರು ಬದಲಾವಣೆ ಬಯಸಿದ್ದಾರೆ. ಅನೇಕ ರಾಜ್ಯಗಳಿಂದ ನಾಯಕರು ಬಂದು ನಮ್ಮ ಶಾಸಕರನ್ನು ಕರೆದುಕೊಂಡು ಬರುವ ಕೆಲಸ ಮಾಡಿದ್ದಾರೆ. ತೆಲಂಗಾಣದ ಜನರು ಪ್ರತ್ಯೇಕ ರಾಜ್ಯ ಕೊಟ್ಟಿದ್ದಕ್ಕೆ ಗೆಲ್ಲಿಸಿದ್ದಾರೆ. ಸೋನಿಯಾ ಗಾಂಧಿಗೆ ಕೃತಜ್ಞತೆಯಾಗಿ ಕಾಂಗ್ರೆಸ್ ಗೆಲ್ಲಿಸಿದ್ದಾರೆ ಎಂದು ಹೈದರಾಬಾದ್ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.