ಚಾಮರಾಜನಗರ : ತಾಲೂಕಿನ ಬೇಡರಪುರ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಬೆಳಕಿಗೆ ಬಂದಿದೆ.
ಮಹದೇವಸ್ವಾಮಿ (48), ಸವಿತಾ (40), ಸಿಂಚನಾ (13) ಮೃತ ದುರ್ದೈವಿಗಳು. ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿದೆ. ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ವರದಿಯಾಗಿದೆ. ಮೃತ ದೇಹಗಳು ಸಿಮ್ಸ್ ಆಸ್ಪತ್ರೆಗೆ ರವಾನೆಯಾಗಿದೆ. ಸದ್ಯ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರು ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ.