ಬೆಂಗಳೂರು : ಇಂದು ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಸಂಭ್ರಮದ ಆಚರಣೆಯಾಗಿದ್ದು, ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಕಾರ್ಯಕ್ರಮ ಹಿನ್ನೆಲೆ ಮೈದಾನದ ಸುತ್ತ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಸಿಎಂ ಸಿದ್ದರಾಮಯ್ಯ ಹಾಗೂ ಗಣ್ಯ ಗಣ್ಯಾಧಿ ವ್ಯಕ್ತಿಗಳು ಮೈದಾನಕ್ಕೆ ಆಗಮಿಸಲಿದ್ದಾರೆ. ಪ್ರತಿಯೊಬ್ಬರನ್ನು ತಪಾಸಣೆ ಮಾಡಿ ಮೈದಾನದಲ್ಲಿ ಬಿಡಲಾಗುತ್ತದೆ. ಪಾಸ್ ಇದ್ದವರಿಗೆ ಮಾತ್ರ ಮೈದಾನದ ಒಳಗಡೆ ಪ್ರವೇಶ ನೀಡಲಾಗುತ್ತದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಭದ್ರತೆಗೆ 9 ಡಿಸಿಪಿ, 16 ಎಸಿಪಿ, 46 ಇನ್ಸ್ಪೆಕ್ಟರ್, 109 PSI, 77 ASI ಸೇರಿ 1000ಕ್ಕೂ ಹೆಚ್ಚು ಸಿಬ್ಬಂದಿ, ಸಂಚಾರ ನಿರ್ವಹಣೆಗೆ ಒಟ್ಟು 575 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 10 KSRP, ಸಿಎಆರ್ ತುಕಡಿ, 2 ಅಗ್ನಿಶಾಮಕ ವಾಹನ, ಎರಡು ಆ್ಯಂಬುಲೆನ್ಸ್, ಕ್ಷಿಪ್ರ ಕಾರ್ಯಪಡೆ ಮಾಡಲಾಗಿದೆ.