ಮೂಡಿಗೆರೆ ಬಿಜೆಪಿ(bjp) ಶಾಸಕ ಎಂ.ಪಿ.ಕುಮಾರಸ್ವಾಮಿ(mpkumarswamy)ಗೆ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶಿಕ್ಷೆ ವಿಧಿಸಿದೆ.
ಒಟ್ಟು 8 ಕೇಸ್ಗಳಲ್ಲಿ 1.38 ಕೋಟಿ ಹಣ ಪಾವತಿಸಬೇಕು. ಇಲ್ಲವಾದರೆ ತಲಾ 6 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಜೆ. ಪ್ರೀತ್ ಆದೇಶ ಹೊರಡಿಸಿದ್ದಾರೆ. ಎಂ.ಪಿ.ಕುಮಾರಸ್ವಾಮಿ ಹೂವಪ್ಪಗೌಡ ಎಂಬುವವರಿಂದ 1.35 ಕೋಟಿ ರೂಪಾಯಿ ಸಾಲ ಪಡೆದಿದ್ದರು. ಈ ಹಣ ಪಾವತಿ ಸಂಬಂಧ ಶಾಸಕ ಕುಮಾರಸ್ವಾಮಿ ಹೂವಪ್ಪಗೌಡ ಅವರಿಗೆ ನೀಡಿದ್ದ 8 ಚೆಕ್ ಗಳು ಬೌನ್ಸ್ ಆಗಿತ್ತು.
ಈ ಸಂಬಂಧ ಹೂವಪ್ಪಗೌಡ ಕುಮಾರಸ್ವಾಮಿ ವಿರುದ್ಧ ನ್ಯಾಯಾಲಯದಲ್ಲಿ 8 ಕೇಸ್ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಪ್ರೀತ್ ಅವರು, ಆರೋಪಿ ಶಾಸಕರಿಗೆ 8 ಕೇಸ್ ಗಳಲ್ಲಿ ತಲಾ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ್ದಾರೆ.
ಸಾಲ ಮರುಪಾವತಿ ಮಾಡದಿದ್ದಲ್ಲಿ ತಲಾ 6 ತಿಂಗಳು ಒಟ್ಟು 4 ವರ್ಷ ಜೈಲು ಶಿಕ್ಷೆ ಅನುಭವಿಸುವಂತೆ ಶಿಕ್ಷೆ ಪ್ರಕಟಿಸಲಾಗಿದೆ. ಇದನ್ನೂ ಓದಿ : – ಮಹಿಳಾ ಐಪಿಎಲ್ ಹರಾಜು- ರೂ. 3.4 ಕೋಟಿಗೆ ಆರ್ ಸಿಬಿ ಪಾಲಾದ ಸ್ಮೃತಿ ಮಂದಾನ!
0 127 Less than a minute