ಉಡುಪಿ : ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಉಡುಪಿಯ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳಲ್ಲಿ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧನ ಮಾಡಲಾಗಿದೆ ಎಂದು ವರದಿಯಾಗಿದೆ.
ದಿನದಿಂದ ದಿನಕ್ಕೆ ಕರ್ನಾಟಕದಲ್ಲಿ ಮಾದಕ ವಸ್ತುಜಾಲದಲ್ಲಿ ಹೆಚ್ಚಾಗಿದ್ದು, ಅದರಲ್ಲೂ ವಿದ್ಯಾರ್ಥಿಗಳೇ ಶಾಮೀಲಾಗಿರುವುದು ಬೆಳಕಿಗೆ ಬರುತ್ತಿದೆ. ಈಗಾಗಲೇ ರಾಜ್ಯದಲ್ಲಿ ಡ್ರಗ್ಸ್ ದಂಧೆ ತಡೆಯಲು ನೂತನ ಗೃಹ ಸಚಿವ ಜಿ.ಪರಮೇಶ್ವರ್ ಮುಂದಾಗಿದ್ದಾರೆ. ಈ ಬೆನ್ನಲ್ಲೆ ಉಡುಪಿಯ ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಐವರು ಭಾಗಿಯಾಗಿರುವುದು ತಿಳಿದು ಬಂದಿದ್ದು, ಮೂವರು ವಿದ್ಯಾರ್ಥಿಗಳಲ್ಲಿ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿರುವುದು ವರದಿಯಾಗಿದೆ.
ಉಡುಪಿ ಜಿಲ್ಲೆಯ ಹೆರ್ಗಾ ಗ್ರಾಮದ ಈಶ್ಚರ ನಗರದಲ್ಲಿ ಮೂವರು ಗಾಂಜಾ ಮಾರುತ್ತಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಪೊಲೀಸರು ಆಗಮಿಸಿದ್ದು, ಬರೊಬ್ಬರಿ 35 ಸಾವಿರ ಮೌಲ್ಯದ 7.3 ಗ್ರಾಂ ಮೆಥಾಂಪೆಟಮೆನ್ ಮಾದಕ ದ್ರವ್ಯವನ್ನ ಜೊತೆಗೆ 1.25 ಲಕ್ಷ ಮೌಲ್ಯದ ಡ್ಯೂಕ್ ಬೈಕ್ ಹಾಗೂ 1 ಲಕ್ಷ ಮೌಲ್ಯದ 2 ಮೊಬೈಲ್ ಫೋನ್ಗಳನ್ನ ವಶ ಪಡಿಸಿಕೊಳ್ಳಲಾಗಿದೆ.
ಅಲ್ಲದೇ ಉಡುಪಿಯಲ್ಲಿ ನಿಲ್ಲದ ದಂಧೆಯಲ್ಲಿ ತೊಡಗಿದ್ದ ಕೇರಳ ಮೂಲದ ನಿಭೀಷ್(23), ಅಮಲ್ (22) ವಿದ್ಯಾರ್ಥಿಗಳನ್ನು ಬಂಧನ ಮಾಡಲಾಗಿದೆ. ಮತ್ತೋರ್ವ ವಿದ್ಯಾರ್ಥಿ ಬಂಧನದ ವೇಳೆ ತಲೆಮರೆಸಿಕೊಂಡಿದ್ದು, ಮುಂದುವರಿದ ಹುಡುಕಾಟ ನಡೆಸಲಾಗುತ್ತಿದೆ.
ಈಗಾಗಲೇ ಡ್ರಗ್ಸ್ ದಂಧೆಗೆ ಕಡಿವಾಣ ಹಾಕಲು ನೂತನ ಗೃಹ ಸಚಿವ ಜಿ.ಪರಮೇಶ್ವರ್ ಪ್ಲಾನ್ ಮಾಡುತ್ತಿದ್ದು, ಹಲವು ದಿನಗಳ ಹಿಂದೆ ತುಮಕೂರಿನಲ್ಲಿ ಸಚಿವ ಜಿ.ಪರಮೇಶ್ವರ್ ಡ್ರಗ್ಸ್ ವಿಚಾರವಾಗಿ ದೊಡ್ಡ ಆಂದೋಲನಕ್ಕೆ ಪ್ಲಾನ್ ಮಾಡಿದ್ದರು. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಡ್ರಗ್ಸ್ ದಂಧೆ ಸಂಪೂರ್ಣ ಬ್ರೇಕ್ ಹಾಕಲಾಗುತ್ತಾ ಅನ್ನೋದನ್ನು ಕಾದು ನೋಡಬೇಕಾಗಿದೆ.