ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಸಿಡಬ್ಲ್ಯೂಸಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರಿಗೆ, ಮಂಗಳೂರಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಅವರ ಧರ್ಮಪತ್ನಿ ಚನ್ನಮ್ಮ ಅವರಿಗೆ ಅನಿರೀಕ್ಷಿತವಾಗಿ ಇಬ್ಬರು ಮುಖಾಮುಖಿಯಾದರು.
ನಂತರ ಬಳಿಕ ದೇವೇಗೌಡರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದರು. ಕೆಲ ಕಾಲ ಕುಶಲೋಪರಿ, ಮಾತುಕತೆ ಬಳಿಕ ಪರಸ್ಪರರು ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.