ದೆಹಲಿ : ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗಿರು ಬಿಜೆಪಿ ಹಿರಿಯ ನಾಯಕರ ಕೆಎಸ್ ಈಶ್ವರಪ್ಪ (KS Eshwarappa) ಅವರು ನೆನ್ನೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುವ ಈ ವೇಳೆ ಪುತ್ರನಿಗೆ ಹಾವೇರಿ ಲೋಕಸಭಾ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಮಾಹಿತಿ ಬಂದಿದೆ.
ಕರ್ನಾಟಕ ರಾಜ್ಯ ರಾಜಕಾರಣದ ಸ್ಥಿತಿಗತಿ ಬಗ್ಗೆ ವಿವರಿಸಿದ್ದಾರೆ. ಅಲ್ಲದೇ ಕೆಲ ಸಮಸ್ಯೆಗಳನ್ನುಅಮಿತ್ ಶಾ ಅವರ ಗಮನಕ್ಕೆ ತಂದಿದ್ದಾರೆ. ಇನ್ನು ಬಹುಮುಖ್ಯವಾಗಿ ಮಹತ್ವದ ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಪುತ್ರ ಕಾಂತೇಶ್ ಆಕಾಂಕ್ಷಿಯಾಗಿದ್ದಾರೆ. ಪುತ್ರನ ಸ್ಪರ್ಧೆಗೆ ಅನುವು ಮಾಡಿಕೊಡಬೇಕೆಂದು ಈಶ್ವರಪ್ಪ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅಲ್ಲದೇ ಪಕ್ಷ ನಿಮ್ಮ ಜೊತೆ ಇರುತ್ತದೆ ಎಂದು ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ತಮ್ಮ ಪುತ್ರನಿಗೆ ಈ ಬಾರಿ ಹಾವೇರಿ ಲೋಕಸಭಾ ಟಿಕೆಟ್ ನೀಡಲಿದೆ ಎನ್ನುವ ವಿಶ್ವಾಸದಲ್ಲಿ ಈಶ್ವರಪ್ಪ ಇದ್ದಾರೆ.