ಬೆಂಗಳೂರು : ಇಂದು ಬೆಂಗಳೂರಿನ ಬಹುತೇಕ ದೇಗುಲಗಳಲ್ಲಿ ವೈಕುಂಠ ಏಕಾದಶಿ (Vaikuntha Ekadashi) ಸಂಭ್ರಮ ಮನೆ ಮಾಡಿದೆ
ಸಿಲಿಕಾನ್ ಸಿಟಿಯ ಮಲ್ಲೇಶ್ವರದ ಟಿಟಿಡಿ ದೇವಸ್ಥಾನದಲ್ಲಂತೂ ವೈಕುಂಠ ಏಕಾದಶಿ ಸಂಭ್ರಮ ಅದ್ದೂರಿಯಾಗಿದ್ದು, ನಿನ್ನೆಯಿಂದಲೇ ಭರದಿಂದ ಸಿದ್ದತೆಯನ್ನು ಮಾಡಲಾಗಿತ್ತು. ದೇಗುಲಗಳ ಆವರಣದಲ್ಲಿ ಇಂದು ಹಬ್ಬದ ವಾತಾವರಣ ನಿರ್ಮಾಣವಾಗಿದೆ.
ವೈಕುಂಠ ಏಕಾದಶಿ ಪ್ರಯುಕ್ತವಾಗಿಯೇ ದೇವಸ್ತಾನದ ಸುತ್ತಲೂ ದಕ್ಷಿಣ ಶೈಲಿಯ ಚಪ್ಪರ ಹಾಕಿ ಹೂವಿನಿಂದ ಅಲಾಂಕಾರ ಮಾಡಲಾಗಿದೆ. ಬೆಳಗ್ಗೆ 6 ಗಂಟೆ ಸುಮಾರಿಗೇ ವೈಕುಂಠನಿಗೆ ವಿಶೇಷ ಪೂಜೆ ಆರಂಭವಾಗಿದೆ. ವೆಂಕಟೇಶ್ವರನಿಗೆ ಪಂಚಾಭಿಷೇಕ ಮಾಡಿ, ಪುಷ್ಪಭಿಷೇಕ ಮಾಡಿ ನಂತರ ವಿಶೇಷ ಅಲಂಕಾರ ಮಾಡಿ ಭಕ್ತದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ದೇಗುಲಕ್ಕೆ ಬಂದ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗುತ್ತದೆ. ದೇವಸ್ಥಾನಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆಯಿದೆ.