ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ನಾಳೆಯಿಂದ ಎರಡು ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಒಳನಾಡಿನ ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಪ್ರತ್ಯೇಕ ಕಡೆ ಭಾರಿ ಮಳೆಯಾಗಲಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೆಳಗಾವಿಯ ಅಲ್ಲಲ್ಲಿ ಮಳೆ ಸಾಧಾರಣವಾಗಿರಲಿದೆ. ಹಾವೇರಿ, ಧಾರವಾಡ ಮತ್ತು ಗದಗ, ವಿಜಯನಗರ ಜಿಲ್ಲೆಯಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಣ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.
ಬೆಂಗಳೂರು ನಗರದಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.