ಮಂಗಳೂರು : ರಾಜ್ಯಾದ್ಯಂತ ಡಯಾಲಿಸಿಸ್ ವ್ಯವಸ್ಥೆಯಲ್ಲಿ ಗೊಂದಲ ವಿಚಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Health Minister Dinesh Gundu Rao)ಪ್ರತಿಕ್ರಿಯೆ ನೀಡಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಾನು ಆರೋಗ್ಯ ಸಚಿವ ಆಗುವ ಮೊದಲೇ , ಡಯಾಲಿಸ್ ವ್ಯವಸ್ಥೆ ಗೊಂದಲದಲ್ಲಿದೆ. ಹಿಂದಿನ ಸರ್ಕಾರ ಎರಡು ಏಜೆನ್ಸಿಗೆ ಕೊಟ್ಟಿತ್ತು, ಅದರಲ್ಲಿ ಒಬ್ಬರು ಅರ್ಧದಲ್ಲೇ ಬಿಟ್ಟಿದ್ರು ಏಜೆನ್ಸಿ ನಿರ್ವಹಣೆ ಸರಿಯಲಿಲ್ಲ, ಸಿಬ್ಬಂದಿಗೆ ಸಂಬಳ ಸರಿಯಾಗಿ ಕೊಡ್ತಾ ಇರಲಿಲ್ಲ ಅವರ ಇಎಸ್ಸೈ, ಪಿಎಫ್ ಕಟ್ಟಿರಲಿಲ್ಲ, ಇದೀಗ ರಾಜ್ಯ ಸರ್ಕಾರ ಕಟ್ಟಲು ನೋಡ್ತಾ ಇದೆ. ಆದರೆ ಅದಕ್ಕೆ ಮೊದಲು ಆ ಏಜೆನ್ಸಿ ಬ್ಲಾಕ್ ಲಿಸ್ಟ್ ಮಾಡೋ ಕೆಲಸ ಆಗ್ತಿದೆ. ಇದರ ಜೊತೆಗೆ ನಾಲ್ಕು ವಿಭಾಗದಲ್ಲಿ ಹೊಸ ಏಜೆನ್ಸಿಗಳಿಗೆ ಟೆಂಡರ್ ಪ್ರಕ್ರಿಯೆ ನಡೀತಾ ಇದೆ.
ಡಯಾಲಿಸ್ ಮೆಷಿನ್ ಕೆಟ್ಟು ಹೋದ ಕಡೆ ಅದನ್ನ ಬದಲಾಯಿಸಲು ಆಗ್ತಿಲ್ಲ ಈಗಿರೋ ಏಜೆನ್ಸಿ ಮಾಡಬೇಕು, ಅಥವಾ ಹೊಸ ಏಜೆನ್ಸಿ ಬಂದ ಬಳಿಕ ಮಾಡಬೇಕು ಯಾವುದೂ ಆಗದೇ ಇದ್ದಲ್ಲಿ ಸರ್ಕಾರವೇ ನಿರ್ವಹಣೆ ಮಾಡೋ ಬಗ್ಗೆ ಚಿಂತನೆ ಇದೆ.
ಸರ್ಕಾರವೇ ಮೆಷಿನ್ ಖರೀದಿಸಿ ನಿರ್ವಹಣೆ ಮಾಡಲು ಈಗಾಗಲೇ ಚಿಂತಿಸಿದೆ. ಟೆಂಡರ್ ಪ್ರಕ್ರಿಯೆ ಮುಗಿಯಲಿ, ಆ ಬಳಿಕ ನಿರ್ಧಾರ ಮಾಡೋಣ ಡಯಾಲಿಸಸ್ ಸಿಬ್ಬಂದಿಯ ಬಗ್ಗೆ ನಮಗೆ ಕಾಳಜಿ ಇದೆ ಅವರಿಗೆ ಯಾವುದೇ ಸಮಸ್ಯೆ ಆಗದಂತೆ ನಾವು ನೋಡಿಕೊಳ್ತೇವೆ ಎಂದಿದ್ದಾರೆ.