ಬೆಂಗಳೂರು : ಸಿಎಂ ಸಿದ್ದರಾಮಯ್ಯ ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಜತೆಯಾಗಿ ಐಷಾರಾಮಿ ವಿಮಾನದಲ್ಲಿ ಬರ ಪರಿಹಾರದ ಚರ್ಚೆಗಾಗಿ ದೆಹಲಿಗೆ ತೆರಳಿದ ವಿಡಿಯೊವೊಂದನ್ನು ಸಚಿವ ಜಮೀರ್ ಅಹ್ಮದ್ ಖಾನ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು ಈ ಬೆನ್ನಲ್ಲೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು, ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಯಾವ ಫ್ಲೈಟ್‌ನಲ್ಲಿ ಓಡಾಡುತ್ತಾರೆ..? ದೇಶದಲ್ಲಿ ಯಾವುದೇ ಸ್ಥಿತಿ ಇದ್ದರೂ ಮೋದಿ ಓಡಾಡುವ ಫ್ಲೈಟ್ ಎಂತದ್ದು? ಮೊದಲು ಅದನ್ನು ಬಿಜೆಪಿಯವರಿಗೆ ಕೇಳಿ.. ಅವರದು ಐಷಾರಾಮಿ ಫ್ಲೈಟ್ ಅಲ್ವಾ? ಎಂದು ಪ್ರಶ್ನಿಸಿದರು. ಬಿಜೆಪಿಯವರಿಗೆ ಬೇರೆ ವಿಷಯವಿಲ್ಲದೆ ಇಂಥ ವಿಚಾರಗಳನ್ನು ದೊಡ್ಡದಾಗಿ ಮಾಡುತ್ತಾರೆ ಎಂದರು.