ಸಿಎಂ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರಕಾರವು ಕೆಲದಿನಗಳ ಹಿಂದೆ ಮೀಸಲಾತಿ ವಿಚಾರದಲ್ಲಿ ದೀರ್ಘಕಾಲದ ಬೇಡಿಕೆ ಈಡೇರಿಸುವ ಹಾಗೂ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ಮತ್ತಷ್ಟು ಆಳಕ್ಕೆ ಒಯ್ಯುವ ಐತಿಹಾಸ ಎಂದು ಸಂಸದ ತೇಜಸ್ವಿಸೂರ್ಯ ಹೇಳಿದ್ರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ಈ ನಿರ್ಧಾರದಿಂದ ಇಲ್ಲಿನವರೆಗೆ ಯಾವ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಸಿಕ್ಕಿರಲಿಲ್ಲವೋ ಅವರಿಗೆ ನ್ಯಾಯ ಒದಗಿಸಲು ಸಾಧ್ಯವಾಗಿದೆ. ಒಳ ಮೀಸಲಾತಿ ಘೋಷಣೆ ವಿರೋಧಿಸುವ ಕಾಂಗ್ರೆಸ್ ಧೋರಣೆ ಎಲ್ಲರಲ್ಲಿ ಆಶ್ಚರ್ಯ ತಂದಿದೆ. ಅದು ಅಸಹ್ಯ ತರಿಸುವಂತಿದೆ ಎಂದು ಆಕ್ಷೇಪಿಸಿದರು.
ಅಲ್ಪಸಂಖ್ಯಾತರಿಗೆ ಇದ್ದ, ಮುಸ್ಲಿಂ ಸಮುದಾಯಕ್ಕೆ ಸಂವಿಧಾನಬಾಹಿರವಾಗಿ ಕೊಡುತ್ತಿದ್ದ ಶೇ 4 ಮೀಸಲಾತಿಯನ್ನು ರದ್ದುಪಡಿಸಿ ಲಿಂಗಾಯತ, ಒಕ್ಕಲಿಗರಿಗೆ ನೀಡಿದ್ದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹಾಗಾಗಿ ಮತ್ತೆ ಅಧಿಕಾರಕ್ಕೆ ಬಂದರೆ ಮತ್ತೆ ಶೇ 4 ಮೀಸಲಾತಿಯನ್ನು ಮುಸ್ಲಿಮರಿಗೆ ಕೊಡುವುದಾಗಿ ಕಾಂಗ್ರೆಸ್ ನಾಯಕರು ಹೇಳುತ್ತಿರುವುದು ಅಚ್ಚರಿ ತರುವಂತಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕರಿದ್ರು. ಶೇ 13ರಷ್ಟು ಮುಸ್ಲಿಂ ಸಮುದಾಯ ರಾಜ್ಯದಲ್ಲಿದೆ. ಅದಕ್ಕೆ ಅನುಗುಣವಾಗಿ ಅವರಿಗೆ ಮೀಸಲಾತಿ ಕೊಡುವುದಾಗಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರು ಹೇಳುತ್ತಿದ್ದಾರೆ. ಇದು ರಾಜ್ಯದ ಹಿಂದುಳಿದ ಸಮುದಾಯಗಳಿಗೆ ಮಾಡುತ್ತಿರುವ ಅತ್ಯಂತ ಘೋರ ಅನ್ಯಾಯ. ಇದನ್ನು ರಾಜ್ಯದ ಜನತೆ ಅತ್ಯಂತ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಎಚ್ಚರಿಸಿದರು.