ದೆಹಲಿ ; ಹೈಕಮಾಂಡ್ ಭೇಟಿಗಾಗಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ದೆಹಲಿಗೆ ತೆರಳಿದ್ದಾಗ ಕೇಂದ್ರ ನಾಯಕರು ಚುನಾವಣೆ ರಾಜಕಾರಣಕ್ಕೆ ಬೇಸತ್ತು ಚುನಾವಣಾ ರಾಜಕೀಯಕ್ಕೆ ಡಿವಿಎಸ್ ನಿವೃತ್ತಿ ಘೋಷಣೆ ಮಾಡುವ ಚಿಂತನೆ ಮಾಡಿದ್ದಾರಾ ಅನ್ನೋದರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿಮಾಧ್ಯಮದೊಂದಿಗೆ ಮಾತನಾಡಿ ಅವರು, ಕುಗ್ರಾಮದಲ್ಲಿದ್ದ ನನ್ನನ್ನು ಬಿಜೆಪಿ ಪಕ್ಷ ಶಾಸಕ, ಸಂಸದ, ಕೇಂದ್ರ ಸಚಿವ, ಮುಖ್ಯಮಂತ್ರಿಯನ್ನಾಗಿ ಮಾಡಿದೆ.
ಮಾಜಿ ಸಿಎಂ ಡಾ.ಬಿ.ಎಸ್. ಯಡಿಯೂರಪ್ಪರ ಬಳಿಕ ಪಕ್ಷದಲ್ಲಿ ಇಷ್ಟೊಂದು ಸ್ಥಾನಗಳನ್ನು ಪಡೆದ ವ್ಯಕ್ತಿ ನಾನೊಬ್ಬನೇ. ಇನ್ನು ಏನಿದ್ದರೂ ಪಕ್ಷವನ್ನು ಗೆಲ್ಲಿಸುವುದರಲ್ಲಿ ನನಗೆ ಆಸಕ್ತಿ.
ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿ ಮಾಡುವುದರಲ್ಲಿ ಆಸಕ್ತಿ ಎನ್ನುವ ಮೂಲಕ ಪರೋಕ್ಷವಾಗಿ ಸದಾನಂದಗೌಡ ಅವರು ಚುನಾವಣಾ ರಾಜಕೀಯ ನಿವೃತ್ತಿ ಎಂಬ ವಿಚಾರವನ್ನು ಸುಳಿವು ನೀಡಿದ್ದಾರೆ.