ಬೆಂಗಳೂರು : ಬೆಂಗಳೂರು ಜಿಲ್ಲೆಗೆ ಕನಕಪುರ ತಾಲೂಕನ್ನು ಸೇರ್ಪಡೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಕನಕಪುರ ತಾಲೂಕಿನ ಶಿವನಹಳ್ಳಿಯಲ್ಲಿ ವೀರಭದ್ರಸ್ವಾಮಿ ದೇವಸ್ಥಾನ ಶಿಲಾ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಮ್ಮದು ರಾಮನಗರ ಜಿಲ್ಲೆ ಅಂತಾ ಮೂಲೆಗೆ ತಳ್ಳಬೇಡಿ. ಯಾರೋ ಹೆಸರು ಪಡೆಯೋದಕ್ಕಾಗಿ ರಾಮನಗರ ಜಿಲ್ಲೆಯನ್ನಾಗಿ ಮಾಡಿದ್ದಾರೆ.
ಕನಕಪುರದವರು ಇನ್ಮುಂದೆ ಬೆಂಗಳೂರು ಜಿಲ್ಲೆಯವರು. ಬೆಂಗಳೂರು ಜಿಲ್ಲೆಗೆ ಕನಕಪುರ ತಾಲೂಕನ್ನು ಸೇರ್ಪಡೆ ಮಾಡುವೆ ಎಂದು ವಿಜಯ ದಶಮಿ ಹಬ್ಬದಂತೆ ಹೇಳಿಕೆ ನೀಡಿದ್ದೇನೆ ಇದನ್ನ ಮಾಡೇ ತಿರುತ್ತೇನೆ ಎಂದು ಘಂಟಾಘೋಷವಾಗಿ ಡಿಸಿಎಂ ಡಿಕೆಶಿ ಹೇಳಿಕೆ ನೀಡಿದ್ದಾರೆ.