Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!Political NewsState News

ಯಾವುದೇ ರೀತಿಯಲ್ಲಿ ಪಕ್ಷವನ್ನು ಒಡೆಯುವ ಕೆಲಸ ಮಾಡಲ್ಲ : ಜಿ.ಟಿ ದೇವೇಗೌಡ 

ಬೆಂಗಳೂರು : ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಸಹಿತ ವಿಪಕ್ಷ ಶಾಸಕರನ್ನು ಪಕ್ಷದತ್ತ ಸೆಳೆಯಲು ಡಿಸಿಎಂ ಡಿ.ಕೆ. ಶಿವಕುಮಾರ್ ಯತ್ನಿಸುತ್ತಿದ್ದಾರೆ.  ಈ ಸಂದರ್ಭದಲ್ಲಿ ನಾನು ಕಾಂಗ್ರೆಸ್​ಗೆ ಬರಲ್ಲ ಅಂತಾ ಡಿಕೆ ಶಿವಕುಮಾರ್​ಗೆ ಹೇಳಿದ್ದೇನೆ ಎಂದು ಜಿಟಿ ದೇವೇಗೌಡರು ತಿಳಿಸಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು,ಸದಾಶಿವನಗರದಲ್ಲಿ ಅವರೇ ಬಂದು ನನ್ನನ್ನು ಭೇಟಿ ಮಾಡಿದ್ದರು. ಭೇಟಿ ವೇಳೆ ಎಸ್​.ಟಿ.ಸೋಮಶೇಖರ್, ಪುಲಿಕೇಶಿ ನಗರ ಶಾಸಕರು, ನೆಲಮಂಗಲ ಶಾಸಕರು ಇದ್ದರು. ಈ ಹಿಂದೆ ಪಕ್ಷಕ್ಕೆ ಕರೆದರೂ ಯಾಕೆ ಬರಲಿಲ್ಲ ಎಂದು ಹೇಳಿದ್ದರು. ಅದೃಷ್ಟ ಇರುವವರಿಗೆ ಅಧಿಕಾರ ಸಿಗುತ್ತೆ, ಇಲ್ಲಂದರೆ ಸಿಗಲ್ಲ ಅಂತ ಹೇಳಿದ್ದಾಗಿ ತಿಳಿಸಿದರು.

ನಾನು ಕಾಂಗ್ರೆಸ್​​ಗೆ ಹೋಗುವ ಪರಿಸ್ಥಿತಿ ಇಲ್ಲ ಎಂದು ಸ್ಪಷ್ಟಪಡಿಸಿದ ಜಿ.ಟಿ.ದೇವೇಗೌಡ, ನಾನು ಕಾಂಗ್ರೆಸ್​ಗೆ ಬರಲ್ಲ ಅಂತಾ ಡಿ.ಕೆ.ಶಿವಕುಮಾರ್​ಗೆ ಹೇಳಿದ್ದೇನೆ. ಜೆಡಿಎಸ್​ನ 19 ಶಾಸಕರೂ ಒಟ್ಟಾಗಿ ಇದ್ದೇವೆ. ಯಾವುದೇ ರೀತಿಯಲ್ಲಿ ಪಕ್ಷವನ್ನು ಒಡೆಯುವ ಕೆಲಸ ಮಾಡಲ್ಲ ಎಂದು ಹೇಳಿದರು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!