ಬೆಂಗಳೂರು : ಸಿಎಂ ವಿಶೇಷ ಕರ್ತವ್ಯಾಧಿಕಾರಿ ಮಹದೇವ್ ಅವರಿಗೆ ಸಿಎಂ ಸಿದ್ದರಾಮಯ್ಯಪುತ್ರ ಯತೀಂದ್ರ ಅವರು ಮೊಬೈಲ್ನಲ್ಲಿ ” ನಾನು ನೀಡಿದ ಲಿಸ್ಟ್ನದ್ದು ಮಾತ್ರ ಮಾಡಿ” ಎಂಬ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮದೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ನನ್ನ ರಾಜಕೀಯ ಜೀವನದಲ್ಲಿ ವರ್ಗಾವಣೆ ದಂಧೆ ಮಾಡಿಲ್ಲ. ವರ್ಗಾವಣೆ ದಂಧೆ ಮಾಡಿದ್ದೆ ರಾಜಕೀಯದಿಂದ ನಿವೃತ್ತಿ ಆಗುತ್ತೇನೆ.
ಯತೀಂದ್ರ ಅವರು ವರ್ಗಾವಣೆ ಬಗ್ಗೆ ಮಾತಾಡಿಲ್ಲ. ಸಿಎಸ್ಆರ್ ಫಂಡ್ ವಿಚಾರವಾಗಿ ಯತೀಂದ್ರ ಮಾತಾಡಿದ್ದಾರೆ ರಾಜಕೀಯ ಕಾರಣಕ್ಕಾಗಿ ಈ ಆರೋಪ ಮಾಡಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.