ದೊಡ್ಡಬಳ್ಳಾಪುರ : ಕಾಲೇಜಿನಿಂದ ಮನೆಗೆ ಬಂದ ಯುವತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಘಟನೆ ದೊಡ್ಡಬಳ್ಳಾಪುರದ ತ್ಯಾಗರಾಜನಗರದಲ್ಲಿ ನಡೆದಿದೆ.
ಜಾನ್ಸಿ (17) ಆತ್ಮಹತ್ಯೆ ಮಾಡಿಕೊಂಡ ಯುವತಿ. ಡೆತ್ ನೋಟ್ ನಲ್ಲಿ ನಾನು ಯಾರಿಗೂ ಮೋಸ ಮಾಡಿಲ್ಲ. ಬುಜ್ಜಿ,ಆಲ್ ಫ್ರೆಂಡ್ಸ್ ಮಿಸ್ ಯೂ ನಾನು ಈ ಲೋಕವನ್ನು ಬಿಟ್ಟು ತೆರಳುತ್ತಿದ್ದೇನೆ ಎಲ್ಲರೂ ಖುಷಿಯಾಗಿರಿ ಎಂದು ಬರೆದಿರುವುದು ಬೆಳಕಿಗೆ ಬಂದಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಈ ಘಟನೆ ಸಂಬಂಧಿಸಿ, ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.