Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ಯಾದಗಿರಿಯ ಪಡಿತರ ಅಕ್ಕಿ ಕಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : 700 ಕ್ವಿಂಟಾಲ್ ಅಕ್ಕಿ ವಶಕ್ಕೆ

ಯಾದಗಿರಿ: ಜಿಲ್ಲೆಯ ಶಹಾಪುರದಲ್ಲಿನ ಪಡಿತರ ಅಕ್ಕಿ ಕಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರನ ರೈಸ್ ಮಿಲ್‍ನಿಂದ ಬರೋಬ್ಬರಿ 700 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಗುರುಮಠಕಲ್ ನಲ್ಲಿರುವ ಲಕ್ಷ್ಮೀವೆಂಕಟೇಶ್ವರ ರೈಸ್ ಮಿಲ್ ನಿಂದ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಇದು ಮಣಿಕಂಠ ರಾಠೋಡ್ ಸಹೋದರ ರಾಜು ರಾಠೋಡ್‍ಗೆ ಸೇರಿದ್ದಾಗಿದೆ. ಸುರಪುರ ಡಿವೈಎಸ್‌ಪಿ ಜಾವೇದ್ ಇನಾಮ್ದಾರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ದಾಳಿ ವೇಳೆ ಪಾಲಿಶ್ ಮಾಡಿದ್ದ 630 ಕ್ವಿಂಟಾಲ್ ಪಡಿತರ ಅಕ್ಕಿ ಸೇರಿ ಒಟ್ಟು 700 ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.

630 ಕ್ವಿಂಟಾಲ್ ಪಾಲಿಶ್ ಮಾಡಿರೋ ಪಡಿತರ ಅಕ್ಕಿಯ ಜೊತೆಗೆ 70 ಕ್ವಿಂಟಾಲ್ ಅಕ್ಕಿ ಪಾಲಿಶ್ ಮಾಡಲು ರೆಡಿ ಮಾಡಿಟ್ಟುಕೊಂಡಿದ್ದರು ಎನ್ನಲಾಗಿದೆ. ಸದ್ಯ ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳು ರಾಜು ರಾಠೋಡ್ ಗೆ ಅಕ್ಕಿ ಮಾರಾಟ ಮಾಡಿರೋದಾಗಿ ಹೇಳಿಕೆ ನೀಡಿದ್ದಾರೆ. ಕಳೆದ 15 ದಿನಗಳಿಂದ ರಾಜು ರಾಠೋಡ್ ತಲೆ ಮರಿಸಿಕೊಂಡಿದ್ದು, ಈತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!