ಶಿವಮೊಗ್ಗ: ಶಿವಮೊಗ್ಗ ನಗರದ ರೈಲು ನಿಲ್ದಾಣದ ಪಾರ್ಕಿಂಗ್ ಲಾಟ್ನಲ್ಲಿ 2 ಅನಾಮಧೇಯ ಬಾಕ್ಸ್ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.
ಅನಾಮಧೇಯ ಬಾಕ್ಸ್ ಪತ್ತೆಯಾಗಿಲ್ಲದೇ ಆ ಬಾಕ್ಸ್ ಮೇಲೆ ಮೇಡ್ ಇನ್ ಬಾಂಗ್ಲಾದೇಶ ಮತ್ತು ಫುಡ್ ಗ್ರೈನ್ಸ್ ಆ್ಯಂಡ ಶುಗರ್ಸ್ ಬರೆದಿರುವುದು ಪತ್ತೆಯಾಗಿತ್ತು. ಈ ಬೆನ್ನಲ್ಲೆ ಬಾಂಬ್ ಸ್ಕ್ವಾಡ್, ಶ್ವಾನದಳ ಸಿಬ್ಬಂದಿಯಿಂದ ಪರಿಶೀಲನೆ ನಡೆಸಲಾಗುತ್ತಿದೆ. ಈ ಬಾಕ್ಸ್ ಯಾರದ್ದು, ಯಾಕೆ ಇಲ್ಲಿದೆ ಎಂಬುದು ಇನ್ನು ತಿಳಿದು ಬಂದಿಲ್ಲ ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗಿದೆ.