Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ರಾಜ್ಯದ 8 ಜಿಲ್ಲೆಗಳಲ್ಲಿ ಸೆ. 8 ರವರೆಗೆ ವರುಣಾರ್ಭಟ : ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ರಾಜ್ಯದ 8 ಜಿಲ್ಲೆಗಳಾದ್ಯಂತ ಮುಂದಿನ 24 ಗಂಟೆಗಳ ಕಾಲ ವರುಣಾರ್ಭಟವಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಬೆಂಗಳೂರಿನ ಹಲವು ಭಾಗಗಳಲ್ಲಿ ಕಳೆದ 3 ದಿನಗಳಿಂದ ಮಳೆಯಾಗುತ್ತಿದೆ. ಅಲ್ಲದೇ ರಾಜ್ಯದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳು ಸೇರಿದಂತೆ 8 ಜಿಲ್ಲೆಗಳಲ್ಲಿ 24 ಗಂಟೆಗಳ ಕಾಲ ಮಳೆ ಸುರಿಯುವ ಸಾಧ್ಯತೆಯಿದೆ.

ಇನ್ನುಳಿದಂತೆ ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ರಾಮನಗರ, ಶಿವಮೊಗ್ಗ, ತುಮಕೂರು, ಕೋಲಾರ, ಮಂಡ್ಯ, ಮೈಸೂರು, ವಿಜಯಪುರದಲ್ಲಿ ಸಾಧಾರಣ ಮಳೆಯಾಗಲಿದೆ,  

ಮುಂದಿನ 48 ಗಂಟೆಗಳಲ್ಲಿ ಉತ್ತರ ಒಳನಾಡು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 8 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಸೆಪ್ಟೆಂಬರ್ 8 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ಸಂದೇಶ ರವಾನೆ ಮಾಡಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!