ಕೇಂದ್ರದ ಬಜೆಟ್ ರಾಜ್ಯದಲ್ಲಿ ಮುಂಬರುವ ಸರ್ಕಾರದ ತೀರ್ಮಾನ ಮಾಡುತ್ತದೆ. ಜನರನ್ನು ಮರಳು ಮಾಡಲು ಕೇಂದ್ರ ಸರ್ಕಾರ ಬಜೆಟ್ ಘೋಷಣೆ ಮಾಡಿದೆ. ಈಗ ಬಜೆಟ್ ಘೋಷಣೆ ಆದ್ರೂ ಹಣಕಾಸು ಬಿಡುಗಡೆ ಏಪ್ರಿಲ್ ಮೇಲೆ ಪ್ರಾರಂಭವಾಗುತ್ತದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H.D KUMARASWAMY) ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದೊಂದು ಕರ್ನಾಟಕ ಕೇಂದ್ರಿತ ಚುನಾವಣಾ ಬಜೆಟ್. ರಾಜ್ಯದಲ್ಲಿ ಚುನಾವಣೆ ಕೆಲವೇ ತಿಂಗಳು ಇದೆ. ಬಜೆಟ್ ನಲ್ಲಿ ಘೋಷಣೆ ಮಾಡಿದ ಎಲ್ಲ ಯೋಜನೆಗಳು ಜಾರಿ ಆಗಬೇಕಲ್ಲ ಎಂದು ವ್ಯಂಗ್ಯವಾಡಿದರು.
Budget 2023 Live Updates | Finance Minister Sitharaman presents Budget, extends Income Tax rebate up to Rs 7 lakh
LIVE @ANI | https://t.co/C7SLIRbTTQ#NirmalaSitharaman #Budget2023 #BudgetSession #UnionBudget2023 #UnionBudget #IndiaBudget2023 #incometax pic.twitter.com/OXGlS9J6DG
— ANI Digital (@ani_digital) February 1, 2023
ಭದ್ರಾ, ಮಹಾದಾಯಿ ಕೃಷ್ಣ ಏನೇ ಘೋಷಣೆ ಮಾಡಿದ್ರೂ ಮೊದಲೇ ಮಾಡಬೇಕಿತ್ತು. ಇಂದಿನ ಕಾರ್ಯಕ್ರಮ ಜಾರಿಗೆ ತರಲು ಮುಂದಿನ ಸರ್ಕಾರ ಬರಬೇಕು. ಕೇಂದ್ರದ ಘೋಷಣೆ, ಘೋಷಣೆ ಆಗಿಯೇ ಉಳಿಯತ್ತೆ. ಕೇಂದ್ರದ ಹಣ ಬಿಡುಗಡೆ ಆಗುವುದರ ಒಳಗೆ ಚುನಾವಣಾ ನೀತಿ ಸಂಹಿತೆ ಬರತ್ತೆ. ಜನರನ್ನು ತಾತ್ಕಾಲಿಕವಾಗಿ ಮೆಚ್ಚಿಸಲು ಘೋಷಣೆ ಇರಬಹುದು ಎಂದು ತಿಳಿಸಿದರು. ಇದನ್ನು ಓದಿ :- Budget 2023 – ಆದಾಯ ತೆರಿಗೆ ವಿನಾಯ್ತಿ, ಹೊಸ ಸ್ಲ್ಯಾಬ್ ಗಳ ವಿವರ ಹೀಗಿದೆ
I introduced in 2020, the new personal income tax regime with 6 income slabs, starting from Rs 2.5 Lakhs. I propose to change the tax structure in this regime by reducing the number of slabs to 5 and increasing the tax exemption limit to Rs 3 Lakhs: FM Nirmala Sitharaman pic.twitter.com/6yb9jBE1sj
— ANI (@ANI) February 1, 2023
ಮನೆ ಬಿದ್ದಾಗ 5 ಲಕ್ಷ, ಕೋವಿಡ್ (COVIED) ನಲ್ಲಿ ಸಾವನ್ನಪ್ಪಿದಾಗ 1 ಲಕ್ಷ, ಕೋವಿಡ್ ವಾರಿಯರ್ಸ್ ಗೆ 30 ಲಕ್ಷ ಕೊಡ್ತಿವಿ ಅಂದಿದ್ರು, ಎಲ್ಲಿ ಕೊಟ್ಟರು. ಕೇಂದ್ರ ಘೋಷಣೆ ಮಾಡಿದ ಎಲ್ಲ ಯೋಜನೆಗಳು ಕೇವಲ ಕಾಗದದಲ್ಲಿ ಮಾತ್ರ ಇರತ್ತೆ. ರೈಲ್ವೆ ಯೋಜನೆ 20-30 ವರ್ಷಗಳ ಹಿಂದೆ ಘೋಷಣೆ ಆಗಿರುವುದು ಇನ್ನೂ ಆಮೆ ಗತಿಯಲ್ಲಿ ನಡೆಯುತ್ತಿದೆ. ಬಿಜೆಪಿ ತಿರಸ್ಕಾರ ಮಾಡಿದ್ರೆ ಕರ್ನಾಟಕಕ್ಕೆ ಏನ್ ಕೊಡ್ತಾರೆ ಅನ್ನೋದು ಗೊತ್ತಿಲ್ಲ. ಚುನಾವಣೆ ಆದ್ಮೇಲೆ ಜನ ಮರೆತು ಹೋಗುತ್ತಾರೆ. ಕೇಂದ್ರದ ಬಜೆಟ್ ಮೇಲೆ ನನಗೆ ನಂಬಿಕೆ ಇಲ್ಲ, ಹೆಚ್ಚಿನ ಮಹತ್ವ ಕೊಡಲ್ಲ. ರಾಷ್ಟ್ರೀಯ ಯೋಜನೆಗೆ ನಾವು ಅರ್ಜಿ ಕೊಟ್ಟಿದ್ದೆವು. ಕೇಂದ್ರದಿಂದ ಮೂಗಿಗೆ ತುಪ್ಪ ಸವರುವ ಕೆಲಸ ಆಗಿದೆ ಎಂದು ಹೇಳಿದ್ರು.
ಇದನ್ನು ಓದಿ :- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ ಸಿಎಂ