ಸೋಮವಾರ ಬೆಂಗಳೂರಿ (Bangalore) ಗೆ ನರೇಂದ್ರ ಮೋದಿ (Narendra modi) ಆಗಮನ ಹಿನ್ನೆಲೆಯಲ್ಲಿ 3 ದಿನ ಕೆಲವು ರಸ್ತೆಗಳಲ್ಲಿ ಸಂಚಾರಕ್ಕೆ ನಿಷೇಧಿಸಲಾಗಿದೆ. ಭದ್ರತಾ ಪ್ರೋಟೋಕಾಲ್ ಅಡಿಯಲ್ಲಿ ಬೆಂಗಳೂರಿನ ರಸ್ತೆ ಸಂಚಾರ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ. ಟ್ರಾಫಿಕ್ (Traffic) ಸಮಸ್ಯೆ ನಿಯಂತ್ರಿಸುವ ನಿಟ್ಟಿನಲ್ಲಿ 3 ದಿನಗಳ ಕಾಲ ಎಲ್ಲ ಮಾದರಿಯ ಸರಕು ಸಾಗಣೆ ವಾಹನಗಳ ನಗರ ಪ್ರವೇಶ ನಿಷೇಧಿಸಲಾಗಿದೆ.
ಫೆಬ್ರವರಿ 5, 6, 7 ರಂದು ಬೆಂಗಳೂರು ನಗರದೊಳಗೆ ಎಲ್ಲಾ ರೀತಿಯ ಲಘು, ಮಧ್ಯಮ ಹಾಗೂ ಭಾರಿ ಸರಕು ಸಾಗಣೆ ವಾಹನಗಳಿಗೆ ನಿರ್ಬಂಧ ಹೆರಲಾಗಿದೆ.
ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆ ತನಕ ಕೆಲವು ಪ್ರಮುಖ ಮಾರ್ಗಗಳಲ್ಲಿ ಸಾರ್ವಜನಿಕ ವಾಹನಗಳ ಸಂಚಾರ ನಿರ್ಬಂಧ ಹೆರಲಾಗಿದೆ.
ಸರಕು ಸಾಗಣೆ ವಾಹನಗಳ ಸಂಚಾರ ನಿರ್ಬಂಧ ರಸ್ತೆಗಳು
1. ತುಮಕೂರು ರಸ್ತೆಯಿಂದ ಬೆಂಗಳೂರು ನಗರದೊಳಗೆ ಸರಕು ಸಾಗಣೆ ವಾಹನಗಳಿಗೆ ನಿರ್ಬಂಧ
2. ಮೈಸೂರು ರಸ್ತೆಯಿಂದ ನಾಯಂಡಹಳ್ಳಿ ಮತ್ತು ಸೋಮನಹಳ್ಳಿಯವರೆಗೆ ಸಂಚಾರ ಮಾಡುವಂತಿಲ್ಲ.
3. ಬಳ್ಳಾರಿ ರಸ್ತೆಯಿಂದ ಬೆಂಗಳೂರು ನಗರದೊಳಗೆ ಪ್ರವೇಶ ನಿಷೇಧ.
4. ಹೊಸಕೋಟೆ ರಸ್ತೆಯಿಂದ ಹೆಬ್ಬಾಳವರೆಗೆ ಸಂಚಾರ ಮುಕ್ತವಿಲ್ಲ.
ಮಾರ್ಗ ಬದಲಾವಣೆ ರಸ್ತೆಗಳು
1. ತುಮಕೂರು (Tumakuru) ಕಡೆಯಿಂದ ಬಳ್ಳಾರಿ ರಸ್ತೆ, ಹೈದರಾಬಾದ್ ಕಡೆಗೆ ಸಂಚರಿಸುವ ವಾಹನಗಳು ಡಾಬಸ್ ಪೇಟೆಯಲ್ಲಿ ಎಡ ತಿರುವು ಪಡೆದು ದೊಡ್ಡಬಳ್ಳಾಪುರ ಕಡೆಗೆ ಹೋಗಬೇಕು.
2. ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಸಂಚರಿಸುವ ವಾಹನಗಳು ಸೊಂಡೆಕೊಪ್ಪ ಕ್ರಾಸ್ ನಲ್ಲಿ ಬಲ ತಿರುವು ಪಡೆದು ತಾವರೆಕೆರೆ ಮುಖಾಂತರ ಮಾಗಡಿ ರಸ್ತೆಗೆ ಸಂಪರ್ಕ ಪಡೆದು ಆ ಮೂಲಕ ನೈಸ್ ರಸ್ತೆ ತಲುಪಿ ಮೈಸೂರು ರಸ್ತೆ, ಎಲೆಕ್ಟ್ರಾನಿಕ್ ಸಿಟಿ, ಹೊಸೂರು ಕಡೆಗೆ ಹೋಗಬೇಕು.
3. ಬಳ್ಳಾರಿ ರಸ್ತೆ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಸಂಚರಿಸುವ ವಾಹನಗಳು ದೇವನಹಳ್ಳಿ ಬಲ ತಿರುವು ಪಡೆದು ದೊಡ್ಡಬಳ್ಳಾಪುರ ರಸ್ತೆಯ ಮೂಲಕ ತುಮಕೂರು ಕಡೆಗೆ ಹೋಗಬಹುದು.
4. ಹೊಸಕೋಟೆಯಿಂದ ತುಮಕೂರು ಕಡೆಗೆ ಸಂಚರಿಸುವ ವಾಹನಗಳು ಬೂದಿಗೆರೆ ಕ್ರಾಸ್ ಮುಖಾಂತರ ದೇವನಹಳ್ಳಿ, ದೊಡ್ಡಬಳ್ಳಾಪುರ ಮೂಲಕ ಡಾಬಸ್ ಪೇಟೆ ಮೂಲಕ ತುಮಕೂರು ಮಾರ್ಗದತ್ತ ಸಂಚರಿಸಬಹುದು.
ಇದನ್ನುಓದಿ :- ಎ. ಮಂಜು ಅರಕಲಗೂಡು ಜೆಡಿಎಸ್ ಅಭ್ಯರ್ಥಿ – ಕುಮಾರಸ್ವಾಮಿ