ಬೆಂಗಳೂರು: ನಿನ್ನೆಯಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದರು. ಜುಲೈ 7ಕ್ಕೆ 14ನೇ ಬಾರಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. 16ನೇ ವಿಧಾನಸಭೆಯ ಅಧಿವೇಶನದಲ್ಲಿ ಇಂದು ಹಲವು ವಿಷಯಗಳ ಬಗ್ಗೆ ಪ್ರಸ್ತಾಪವಾಗಲಿದೆ. ಸರ್ಕಾರ ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ವಿಚಾರ, ಬಿಜೆಪಿ ಅವಧಿಯ ವಿವಾದಿತ ತಿದ್ದುಪಡಿ ಕಾಯ್ದೆಗಳನ್ನು ಕೈಬಿಡುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಸದನದ ಆಡಳಿತ ಪಕ್ಷಕ್ಕೆ ಬಿಸಿ ಮುಟ್ಟಿಸಲು ಪ್ರತಿಪಕ್ಷಗಳು ಸಿದ್ಧತೆ ಮಾಡಿಕೊಂಡಿದ್ದು, ಪ್ರತಿಪಕ್ಷಗಳಿಗೆ ತಿರುಗೇಟು ನೀಡಲು ಆಡಳಿತ ಪಕ್ಷ ಕಾಂಗ್ರೆಸ್ ಸಜ್ಜಾಗಿದೆ.
ವಿಧಾನ ಮಂಡಲ ಅಧಿವೇಶನ ಶುರುವಾಗಿದ್ದು, ಇಂದು ಕಾಂಗ್ರೆಸ್ ಘೋಷಿಸಿರುವ ಗ್ಯಾರಂಟಿ ಘೋಷಣೆಗಳ ಬಗ್ಗೆ ಪ್ರಸ್ತಾಪ ಆಗಲಿದೆ. ಶುರುವಾಗಿರುವ ವಿಧಾನಮಂಡಲ ಅಧಿವೇಶನದಲ್ಲಿ ಇಂದು ಮಾಜಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ, 5 ಗ್ಯಾರಂಟಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ. ಈ ವೇಳೆ ಸದನದಲ್ಲಿ ಗ್ಯಾರಂಟಿ ಘೋಷಣೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟಿಸುವ ಸಾಧ್ಯತೆಯಿದೆ. ಸದನದ ಒಳಗೆ ಮತ್ತು ಹೊರಗೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ಮಾಡಲಿದ್ದು, ಏಕಕಾಲದಲ್ಲಿ 2 ಕಡೆ ಪ್ರತಿಭಟನೆ ಮೂಲಕ ಒತ್ತಡ ತಂತ್ರಕ್ಕೆ ಬಿಜೆಪಿ ಮುಂದಾಗಿದೆ.
Live | Karnataka Assembly Session 2023 | ಕರ್ನಾಟಕ ವಿಧಾನಸಭೆ ಅಧಿವೇಶನ 2023 | CM Siddaramaiah #rajnewskannada #rajnewslive #KanndaNewsChannel #BreakingNews #LatestNews #UpdateNews #dailynews #TodayNews #karnataka #live #karnatakaassembly2023 #karnatakaassemblysession2023 #cmsiddaramaiah #congress