ಅಯೋಧ್ಯೆ: ಅಯೋಧ್ಯೆಯಲ್ಲಿ ಜ 22ಕ್ಕೆ ರಾಮಲಲ್ಲಾನ ಪ್ರಾಣ ಪ್ರತಿಷ್ಠೆಗೆ ಕೌಂಟ್‌ಡೌನ್ ಶುರುವಾಗಿದ್ದು ಈಗಾಗಲೇ ಭರ್ಜರಿ ಸಿದ್ದತೆ ನಡೆಸಲಾಗುತ್ತಿದೆ.
ಅಯೋಧ್ಯೆಯ ಶ್ರೀರಾಮ ಮಂದಿರವನ್ನು ಬಾಂಬ್ ದಾಳಿ ಮೂಲಕ ಸ್ಫೋಟಿಸುವುದಾಗಿ ಇ-ಮೇಲ್ ಬಂದಿದ್ದು, ಇದೀಗ ಭಾರೀ ಆತಂಕ ಸೃಷ್ಟಿಯಾಗಿದೆ.
ಬಾಂಬ್ ದಾಳಿ ಬೆದರಿಕೆ ಸಂದೇಶದ ಇ-ಮೇಲ್ನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಎಸ್‌ಟಿಎಫ್ ಎಡಿಜಿ ಅಮಿತಾಬ್ ಯಶ್ ಅವರ ಬಗ್ಗೆಯೂ ಉಲ್ಲೇಖ ಮಾಡಲಾಗಿದೆ. ಇ-ಮೇಲ್ ಕಳುಹಿಸಿದವನು ತನ್ನನ್ನು ಜುಬೈರ್ ಹುಸೇನ್ ಖಾನ್ ಎಂದು ಗುರುತಿಸಿಕೊಂಡಿದ್ದು, ಐಎಸ್‌ಐ ಜತೆ ಸಂಬಂಧವಿದೆ ಎಂದು ಹೇಳಿಕೊಂಡಿದ್ದಾನೆ ಎಂದು ವರದಿಯಾಗಿದೆ. ಈ ಪ್ರಕರಣದ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಬಾಂಬ್ ದಾಳಿ ಬೆದರಿಕೆ ಸಂದೇಶವನ್ನು ಭಾರತೀಯ ಕಿಸಾನ್ ಮಂಚ್‌ನ ರಾಷ್ಟ್ರೀಯ ಅಧ್ಯಕ್ಷ ದೇವೇಂದ್ರ ತಿವಾರಿ ಅವರಿಗೆ ಕಳುಹಿಸಿದ್ದು ತಿಳಿಯಬಹುದಾಗಿದೆ.