ಎಸಿಬಿಯನ್ನ (ACB )ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಎಸಿಬಿಯ ಎಲ್ಲಾ ಕೇಸ್ ಗಳನ್ನ ಲೋಕಾಯುಕ್ತಕ್ಕೆ ವರ್ಗಾಯಿಸುವಂತೆ ಸೂಚನೆ ನೀಡಿದೆ.
ಎಸಿಬಿಗೆ ಪೊಲೀಸ್ ಠಾಣೆ ಸ್ಥಾನಮಾನ ರದ್ದುಪಡಿಸಿ ನ್ಯಾ.ಬಿ.ವೀರಪ್ಪ, ನ್ಯಾ.ಕೆ.ಎಸ್.ಹೇಮಲೇಖಾರವರಿದ್ದ ಪೀಠ ತೀರ್ಪು ನೀಡಿದೆ. ಎಸಿಬಿ ಲೋಕಾಯುಕ್ತ ( ACB LOKAYUKTA ) ವ್ಯಾಪ್ತಿಗೆ ನೀಡಿ ಆದೇಶ ಹೊರಡಿಸಿದೆ. ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ಅಗತ್ಯವಿದೆ. ಮೂರು ವರ್ಷದ ಅವಧಿಗೆ ಅಧಿಕಾರಿಗಳ ನೇಮಕವಾಗಬೇಕು. ಲೋಕಾಯುಕ್ತರ ನೇಮಕ ವೇಳೆ ಅರ್ಹತೆ ಪರಿಗಣಿಸಬೇಕು.
ಜಾತಿ ಆಧರಿಸಿ ಲೋಕಾಯುಕ್ತ, ಉಪಲೋಕಾಯುಕ್ತ ನೇಮಕವಾಗಬಾರದು. ಭ್ರಷ್ಟಾಚಾರ ಆರೋಪ ಹೊತ್ತವರು ಪಾರಾಗಬಾರದು. ಹೀಗಾಗಿ ಲೋಕಾಯುಕ್ತ ಪೊಲೀಸರೇ ತನಿಖೆ ಮುಂದುವರಿಸಬೇಕು ಎಂದು ಸರ್ಕಾರದ ಆದೇಶ ರದ್ದುಪಡಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಹೈಕೋರ್ಟ್ ( HIGH COURT ) ಲೋಕಾಯುಕ್ತ ಪೊಲೀಸ್ ಠಾಣೆ ಸ್ಥಾನಮಾನ ಮರುಸ್ಥಾಪಿಸಿದೆ. ಎಲ್ಲಾ ಪ್ರಕರಣಗಳೂ ಲೋಕಾಯುಕ್ತ ಪೊಲೀಸರಿಗೆ ವರ್ಗಾವಣೆ ಮಾಡಿ ಆದೇಶಿಸಿದೆ. ಎಸಿಬಿ ರಚನೆ ಪ್ರಶ್ನಿಸಿ ಬೆಂಗಳೂರು ವಕೀಲರ ಸಂಘ, ಚಿದಾನಂದ ಅರಸ್, ಸಮಾಜ ಪರಿವರ್ತನಾ ಸಮುದಾಯ, ಮತ್ತಿತರರು PIL ಸಲ್ಲಿಸಿದ್ದರು. ಈ ಸಂಬಂಧ ಇಂದು ತೀರ್ಪು ಪ್ರಕಟಗೊಂಡಿದ್ದು ಎಸಿಬಿ ರಚನೆ ಆದೇಶ ರದ್ದುಪಡಿಸಲಾಗಿದೆ.
ಇದನ್ನೂ ಓದಿ : – ಆಗಸ್ಟ್ 15ರಂದು ವೊಲ್ವೊ ಸೇರಿ ಎಲ್ಲಾ ಬಿಎಂಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣ