ಬೆಂಗಳೂರು : ಮಿಚಾಂಗ್ ಚಂಡಮಾರುತ ಪ್ರಭಾವ ಸ್ವಲ್ಪ ಪ್ರಮಾಣದಲ್ಲಿ ಕರ್ನಾಟಕಕ್ಕೂ ಬೀರಿದ್ದು, ಡಿಸೆಂಬರ್ 6ರವರೆಗೆ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ.
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮಿಚಾಂಗ್ ಚಂಡಮಾರುತ ಪ್ರಭಾವದಿಂದಾಗಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ರಾಯಚೂರು, ಕಲಬುರಗಿ, ಬೀದರ್, ದಕ್ಷಿಣ ಕನ್ನಡ, ಉಡುಪಿಯಲ್ಲೂ ಮಳೆಯಾಗಲಿದೆ.