Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ಸಿಕ್ಕಿಂ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 60ಕ್ಕೆ ಏರಿಕೆ

ಸಿಕ್ಕಿಂ : ಸಿಕ್ಕಿಂ ಹಠಾತ್ ಪ್ರವಾಹದಿಂದ ಸಾವಿಗೀಡಾದವರ ಸಂಖ್ಯೆ 50ರಿಂದ 60ಕ್ಕೆ ಏರಿಕೆಯಾಗಿದೆ. ಅಲ್ಲದೇ 140 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನೆರೆಯ ರಾಜ್ಯ ಪಶ್ಚಿಮ ಬಂಗಾಳದ ತೀಸ್ತಾ ನದಿ ಪಾತ್ರದಲ್ಲಿ 27 ಮೃತದೇಹಗಳು ಪತ್ತೆಯಾಗಿದ್ದು, ಈ ಪೈಕಿ ಏಳು ಮೃತದೇಹಗಳನ್ನು ಗುರುತಿಸಲಾಗಿದೆ. ಪ್ರವಾಹದ ಬಳಿಕ ಸಾವಿರಾರು ಜನರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ. ಒಟ್ಟಾರೆ 1,173 ಮನೆಗಳಿಗೆ ತೀವ್ರ ಹಾನಿಯಾಗಿದೆ ಮತ್ತು 2,413 ಜನರನ್ನು ಇಲ್ಲಿಯವರೆಗೂ ರಕ್ಷಿಸಲಾಗಿದೆ. 25,000 ಜನರಿಗೆ ಪ್ರವಾಹದಿಂದ ತೊಂದರೆಯಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.  ಇದು ತೀಸ್ತಾ ನದಿಯ ನೀರಿನ ಮಟ್ಟವನ್ನು ತೀವ್ರವಾಗಿ ಹೆಚ್ಚಿಸಿತು. ಇದರಿಂದ ಪ್ರವಾಹ ತೀವ್ರ ಸ್ವರೂಪ ಪಡೆಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರವಾಹದಿಂದ ಹಾನಿಗೊಳಗಾದ ರಸ್ತೆಗಳ ನಿರ್ಮಾಣವನ್ನು ಆದಷ್ಟು ಬೇಗ ಮಾಡಲಾಗುತ್ತದೆ. ಮೃತರ ಕುಟುಂಬಗಳಿಗೆ 4 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.ಕೇಂದ್ರ ಸರ್ಕಾರಕ್ಕೆ 44 ಕೋಟಿ ರೂ. ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ ಎಂದು ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!