ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್ ಪಡೆಯುವುದಾಗಿ ಹೇಳಿದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಎಕ್ಸ್ ಖಾತೆಯಲ್ಲಿ ಕಿಡಿಕಾರಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ಸಿಎಂ ಹೇಳಿಕೆ ಗರಂ ಆಗಿದ್ದಾರೆ. ಅವರು ಎಕ್ಸ್‌ನಲ್ಲಿ ಬರೆದಿದ್ದು ಹೀಗೆ
ರಾಜ್ಯದಲ್ಲಿ ಯುವ ಮನಸ್ಸುಗಳನ್ನು ಧಾರ್ಮಿಕ ಆಧಾರದ ಮೇಲೆ ವಿಭಜಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
‘ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರ ನಿರ್ಧಾರವು ನಮ್ಮ ಶೈಕ್ಷಣಿಕ ಸಂಸ್ಥೆಗಳ ಜಾತ್ಯತೀತ ಸ್ವರೂಪದ ಬಗ್ಗೆ ಕಳವಳ ಸೃಷ್ಟಿಸುವಂಥದ್ದು. ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಉಡುಗೆಗೆ ಅವಕಾಶ ನೀಡುವ ಮೂಲಕ ಸಿದ್ದರಾಮಯ್ಯ ಸರ್ಕಾರವು ಯುವ ಮನಸ್ಸುಗಳನ್ನು ಧಾರ್ಮಿಕವಾಗಿ ಒಡೆಯುವುದನ್ನು ಉತ್ತೇಜಿಸುತ್ತಿದೆ. ಇದು ಅಂತರ್ಗತ ಕಲಿಕೆಯ ವಾತಾವರಣವನ್ನು ತಡೆಯುತ್ತದೆ. ಧಾರ್ಮಿಕ ಆಚರಣೆಗಳ ಪ್ರಭಾವವಿಲ್ಲದೆ ವಿದ್ಯಾರ್ಥಿಗಳು ಶಿಕ್ಷಣದ ಮೇಲೆ ಗಮನ ಕೇಂದ್ರೀಕರಿಸುವ ವಾತಾವರಣವನ್ನು ನಿರ್ಮಿಸಬೇಕಾದ ಅಗತ್ಯವಿದೆ’ ಎಂದು ವಿಜಯೇಂದ್ರ ಎಕ್ಸ್ ಬರೆದುಕೊಂಡಿದ್ದಾರೆ.